ಚಿತ್ರದುರ್ಗ : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮುರುಘಾಮಠದ ಶ್ರೀಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಮಠದಲ್ಲಿ ಮತ್ತೊಂದು ಅಹಿತಕರ ಘಟನೆಯೊಂದು ಬೆಳಕಿಗೆ ಬಂದಿದೆ.
ಇಂದು ಬೆಂಗಳೂರಿನ ದೃಷ್ಟಿಮಾಂದ್ಯ ಪೋಷಕರೊಬ್ಬರು ಮಠದ ಶಾಲೆಯಲ್ಲಿ ಓದುತ್ತಿದ್ದ ತಮ್ಮ ಮಗಳು 4 ದಿನಗಳಿಂದ ಕಾಣಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಮಗಳು ಸಿಗದೆ ಹೋದರೆ ಸುಪ್ರೀಮ್ ಕೋರ್ಟ್ ಗೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.
BIGG BREAKING NEWS: ಶ್ರೀಗಳ ಬಂಧನ ಬಳಿಕ ಎ2 ಆರೋಪಿ ವಾರ್ಡನ್ ರಶ್ಮಿ ಬಂಧನ
ಇನ್ನು ಚಿತ್ರದುರ್ಗ ಮುರುಘಾ ಮಠದ ಶ್ರೀಗಳು ಶಿವಮೂರ್ತಿ ಸ್ವಾಮೀಜಿ ಅವರ ವಿರುದ್ಧ ಬಾಲಕಿಯುರ ವಿರುದ್ಧ ಲೈಂಗಿಕ ಆರೋಪಗಳು ಕೇಳಿಬಂದವು ಮತ್ತು ಅವರ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿ ಗುರುವಾರ ರಾತ್ರಿ ಬಂಧಿಸಲಾಗಿದೆ. ಶ್ರೀಗಳ ಬಂಧನದ ಬೆನ್ನಲ್ಲೇ ಪ್ರಕರಣದ ಎ2 ಆರೋಪಿ ಮಠದ ಲೇಡಿ ವಾರ್ಡನ್ ರಶ್ಮಿಯನ್ನೂ ಚಿತ್ರದುರ್ಗದ ಪೊಲೀಸರು ಬಂಧಿಸಿದ್ದಾರೆ.