ಕೊಚ್ಚಿ: ಐಎನ್ಎಸ್ ವಿಕ್ರಾಂತ್ ಸ್ವಾವಲಂಬಿ ಮತ್ತು ಮಹತ್ವಾಕಾಂಕ್ಷೆಯ ಭಾರತದ ಅಸಾಧಾರಣ ಸಂಕೇತವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಇಂದು ಕೇರಳದ ಕೊಚ್ಚಿಯ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಸ್ವದೇಶಿ ನಿರ್ಮಿತ ಭಾರತದ ಮೊದಲ ವಿಮಾನವಾಹಕ ನೌಕೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐಎನ್ಎಸ್ ವಿಕ್ರಾಂತ್ ಸ್ವಾವಲಂಬಿ ಮತ್ತು ಮಹತ್ವಾಕಾಂಕ್ಷೆಯ ಭಾರತದ ಅಸಾಧಾರಣ ಸಂಕೇತವಾಗಿದೆ ಎಂದಿದ್ದಾರೆ.
ಐಎನ್ಎಸ್ ವಿಕ್ರಾಂತ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾರತೀಯ ನೌಕಾಪಡೆಗೆ ನಿಯೋಜಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಿರಿಯ ರಕ್ಷಣಾ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸ್ವಾವಲಂಬಿ ಭಾರತಕ್ಕಾಗಿ ನಮ್ಮ ಪ್ರಯತ್ನವು ಪ್ರತ್ಯೇಕವಾದ ನೀತಿಯಲ್ಲ ಎಂಬುದಕ್ಕೆ INS ವಿಕ್ರಾಂತ್ನ ಕಾರ್ಯಾರಂಭವು ದೃಢೀಕರಣವಾಗಿದೆ. ಇದು ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ಭಾರತದಲ್ಲಿ ನಡೆಯುತ್ತಿರುವ ಬೃಹತ್ ಪರಿವರ್ತನಾ ಬದಲಾವಣೆಯ ಪ್ರಮುಖ ಭಾಗವಾಗಿದೆ ಎಂದು ರಕ್ಷಣಾ ಸಚಿವರು ಹೇಳಿದರು.