ಚಿತ್ರದುರ್ಗ: ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ.ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಶ್ರೀಗಳ ಬಂಧನ ಬಳಿಕ ಇದೀಗ A2 ಪ್ರಮುಖ ಆರೋಪಿ ವಾರ್ಡ್ ನ ರಶ್ಮಿ ಬಂಧಿಸಿದ್ದಾರೆ.
ನಿನ್ನೆ ರಶ್ಮಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಇಂದು ಅವರನ್ನು ಬಂಧಿಸಲಾಗಿದೆ. ಸದ್ಯ ಶ್ರೀಗಳ ಆರೋಗ್ಯ ಏರುಪೇರು ಆಗಿದ್ದರಿಂದ ಜಿಲ್ಲಾಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳ ಬಂಧನವಾಗಿದ್ದು, ಇದೀಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ. ಮುರುಘಾ ಶ್ರೀಗಳ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ 8 ಕೋಟಿ ಮೌಲ್ಯದ ಮಠದ ಆಸ್ತಿ 49 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವರ ಖಾಸಗಿ ದೂರು ನೀಡಿದ್ದಾರೆ. ಶ್ರೀಗಳ ವಿರುದ್ಧ ಜಮೀನು ಅಕ್ರಮ ಮಾರಾಟ, ವಂಚನೆ, ವಿಶ್ವಾಸದ್ರೋಹ ಆರೋಪ ಮಾಡಿದ್ದು, ಮುರುಘಾ ಶರಣರ ವಿರುದ್ಧ 2013ರಲ್ಲಿ ಖಾಸಗಿ ದೂರು ದಾಖಲಾಗಿತ್ತು. ಸಮನ್ಸ್ ನೀಡಿದರೂ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು. ಹೀಗಾಗಿ ಮುರುಘಾ ಮಠದ ಸ್ವಾಮೀಜಿ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆಂಗಳೂರು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.