ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಮಧ್ಯಾಹ್ನ 12.43ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.9 ರ ತೀವ್ರತೆಯ ಭೂಕಂಪ ಉಂಟಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಮಾಹಿತಿಯ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ದಿಗ್ಲಿಪುರದ ಉತ್ತರ-ಈಶಾನ್ಯ (NNE)ನಲ್ಲಿ ಇಂದು ಮಧ್ಯಾಹ್ನ 12.43ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.9 ರ ತೀವ್ರತೆಯ ಭೂಕಂಪವು ಸುಮಾರು 10 ಕಿಮೀ ಆಳದಲ್ಲಿ ಸಂಭವಿಸಿದೆ.
ಭೂಕಂಪದಿಂದಾದ ಹಾನಿ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಗಳು ತಿಳಿಸಿದ್ದಾರೆ.
BREAKING NEWS : ಮುರುಘಾಶ್ರೀಗಳ ಪ್ರಕರಣ ಕಾನೂನು ಪ್ರಕಾರವೇ ನಡೆಯಲಿದೆ : ಸಿಎಂ ಬಸವರಾಜ ಬೊಮ್ಮಾಯಿ