ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ( Dr Shivamurthy Shivasharanaru ) ವಿರುದ್ಧ ಪೋಕ್ಸೋ ಕೇಸ್ ( POSCO Case ) ದಾಖಲಾಗಿತ್ತು. ನಿನ್ನೆ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಲಾಗಿದೆ. ಅಲ್ಲದೇ ಹೃದ್ರೋಗ ಸಮಸ್ಯೆಯಿಂದಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ( Jayadeve Hospital ) ಶಿಫ್ಟ್ ಮಾಡಲಾಗುತ್ತಿದೆ. ಈ ನಡುವೆ ಇದೇ ಮೊದಲ ಬಾರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಮುರುಘಾ ಶರಣರ ವಿರುದ್ಧದ ಪ್ರಕರಣದ ಬಗ್ಗೆ ಮೌನ ಮುರಿದು ಮಾತನಾಡಿದ್ದಾರೆ. ಅವರು ಏನ್ ಹೇಳಿದ್ದಾರೆ ಅಂತ ಮುಂದೆ ಓದಿ..
BIG BREAKING NEWS: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್
ಈ ಬಗ್ಗೆ ಟ್ವಿಟ್ ( Twitter ) ಮಾಡಿರುವಂತ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಅವರು, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು ಹೇಳಿದ್ದಾರೆ.
ಚಿತ್ರದುರ್ಗದ
ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ.ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ
ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು.— Siddaramaiah (@siddaramaiah) September 2, 2022