ಬೆಂಗಳೂರು : ಬೆಂಗಳೂರಿನಲ್ಲಿ ಮೂಲಸೌಕರ್ಯ ಸುಧಾರಿಸದಿದ್ದರೆ ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಐಟಿ ಕಂಪನಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.
BIG NEWS: ಹೆರಿಗೆ ವೇಳೆ ಮಗು ಮೃತಪಟ್ಟರೆ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ ಸರ್ಕಾರ
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಸರಿಯಾದ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುವ ಮೂಲಕ ನಷ್ಟವನ್ನು ಅನುಭವಿಸುವಂತಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ORRCA), ಮೂಲಸೌಕರ್ಯ ಸುಧಾರಿಸದಿದ್ದರೆ ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
BIGG BREAKING NEWS : ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿಂದು ಮುರುಘಾಶ್ರೀ ವಿಚಾರಣೆ
ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್ನಲ್ಲಿ ಭಾರೀ ಮಳೆಯಿಂದಾಗಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಂಪನಿಗಳು ಪರ್ಯಾಯ ಸ್ಥಳಗಳನ್ನು ಹುಡುಕಿಕೊಳ್ಳುವುದಾಗಿ ಐಟಿ ಕಂಪನಿಗಳ ಸಂಘ ಹೇಳಿದೆ.