ಲಕ್ನೋ(ಉತ್ತರ ಪ್ರದೇಶ): ವಲಸೆ ಕಾರ್ಮಿಕರಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಸುಮಾರು 24 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.
ನೇಪಾಳಿ ವಲಸೆ ಕಾರ್ಮಿಕರನ್ನು ಹೊತ್ತ ಡಬಲ್ ಡೆಕ್ಕರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ಅದರ ಒಂದು ಟೈರ್ ಪಂಕ್ಚರ್ ಆಗಿತ್ತು. ಹೀಗಾಗಿ, ಬಸ್ಅನ್ನು ಚಾಲಕ ರಸ್ತೆ ಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಬಸ್ನದಲ್ಲಿದ್ದ ಸುಮಾರು 60 ಪ್ರಯಾಣಿಕರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಾರಾಬಂಕಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಉಳಿದ ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರನ್ನು ನೇಪಾಳಕ್ಕೆ ವಾಪಸ್ ಕಳುಹಿಸುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಬಾರಾಬನಿ ಹಿರಿಯ ಪೊಲೀಸ್ ಅಧಿಕಾರಿ ಪೂರ್ಣೇಂದು ಸಿಂಗ್ ತಿಳಿಸಿದ್ದಾರೆ.
BIG NEWS: ಹೆರಿಗೆ ವೇಳೆ ಮಗು ಮೃತಪಟ್ಟರೆ ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ: ಕೇಂದ್ರ ಸರ್ಕಾರ
BIGG BREAKING NEWS : ಕೆಲವೇ ಕ್ಷಣಗಳಲ್ಲಿ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀ ವಿಚಾರಣೆ
BIGG NEWS : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವಾಜ್!