ಚಿತ್ರದುರ್ಗ: ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಠದ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿನಿಯರ ಬಗ್ಗೆ ಚಿಂತೆ ಶುರುವಾಗಿದೆ. ಹೀಗಾಗಿ ಮಕ್ಕಳ ಹಕ್ಕು ಆಯೋಗವು ಮುರುಘಾ ಮಠದಲ್ಲಿರುವ ವಿದ್ಯಾರ್ಥಿನಿಯರನ್ನು ಬೇರೆಡೆಗೆ ಶಿಫ್ಟ್ ಗೆ ಸೂಚಿಸಲಾಗಿದೆ.
BIGG NEWS: ಬೆಂಗಳೂರಿನಲ್ಲಿ ವಾಹನ ತಪಾಸಣೆ ವೇಳೆ ಟ್ರಾಫಿಕ್ ಸಿಬ್ಬಂದಿಗೆ ಅವಾಜ್ ಹಾಕಿದ ಕುಡುಕ
ಸ್ವಾಮೀಜಿ ಬಂಧನದ ಬೆನ್ನಲ್ಲೆ ಮಠದ ವಿದ್ಯಾರ್ಥಿನಿಯರ ಭವಿಷ್ಯದತ್ತ ಮಕ್ಕಳ ಆಯೋಗ ಚಿಂತನೆ ನಡೆಸಿದೆ. ಸದ್ಯಕ್ಕೆ ವಿದ್ಯಾರ್ಥಿನಿಯರನ್ನು ಮೊರಾರ್ಜಿ ದೇಸಾಯಿ ಹಾಸ್ಟೆಲ್ಗೆ ಶಿಫ್ಟ್ ಮಾಡುವ ನಿರ್ಧಾರ ಕೈಗೊಂಡಿದೆ. ಹಾಸ್ಟೆಲ್ನಲ್ಲಿದ್ದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಆಯೋಗ ತಿಳಿಸಿದೆ.