ಬೆಂಗಳೂರು : ಆಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಪೋಕ್ಸೋ ಪ್ರಕರಣದಡಿ ಬಂಧನಕ್ಕೀಡಾಗಿರುವ ಮುರುಘಾ ಶರಣರ ಪ್ರಕರಣದ ಹಿನ್ನಲೆಯಲ್ಲಿ ಖ್ಯಾತ ಹಿರಿಯ ಪತ್ರಕರ್ತ ಪಿ ಸಾಯಿನಾಥ್ ಅವರು ಮುರುಘಾ ಮಠದಿಂದ ಪಡೆದಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡಲು ನಿರ್ಧರಿಸಿದ್ದಾರೆ.
BIGG NEWS : ಸಾರ್ವಜನಿಕ ಪ್ರದೇಶದಲ್ಲಿ ಕಸ ಹಾಕಿದ ನಾಲ್ವರಿಗೆ ದಂಡ : ಬಿಬಿಎಂಪಿ ಇಬ್ಬರು ಮಾರ್ಷಲ್ಗಳ ಮೇಲೆ ಹಲ್ಲೆ
ಈ ಕುರಿತು ಸಾಯಿನಾಥ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಚಿತ್ರದುರ್ಗದ ಶ್ರೀ ಮುರುಘಾಮಠದ ಪೀಠಾಧಿಪತಿಗಳಾದ ಶ್ರೀ ಶಿವಮೂರ್ತಿ ಮುರುಘಾ ಶರಣರು ಅವರ ಬೆಳವಣಿಗೆಗಳ ಬಗ್ಗೆ ಮಾಧ್ಯಮ ವರದಿಗಳಿಂದ ತಿಳಿದು ನನಗೆ ತುಂಬಾ ಬೇಸರವಾಗಿದೆ. ಅವರು ಈಗ ಪೋಕ್ಸೊ ಮತ್ತು ಎಸ್ಸಿ / ಎಸ್ಟಿ ಕಾಯ್ದೆಯಡಿ ಪ್ರಕರಣ ಮತ್ತು ಆರೋಪಗಳನ್ನು ಎದುರಿಸುತ್ತಿದ್ದಾರೆ. ಮಕ್ಕಳ ಮೇಲೆ ದೌರ್ಜನ್ಯವೆಸಗಿರುವ ಕೃತ್ಯವನ್ನು ಖಂಡಿಸಲು ಶಬ್ದಗಳು ಸಾಕಾಗುವುದಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
BIGG NEWS : ಮುರುಘಾಶ್ರೀಗಳಿಗೆ ಮತ್ತೊಂದು ಸಂಕಷ್ಟ : ವಂಚನೆ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್
‘ಈ ಪ್ರಕರಣದ ಸಂತ್ರಸ್ತ ಬಾಲಕಿಯರ ಜತೆ ನಾವಿದ್ದೇವೆ. ಇವರಿಗೆ ನ್ಯಾಯ ದೊರೆಯಬೇಕು ಎನ್ನುವ ಆಶಯದಿಂದ ಬಸವಶ್ರೀ ಪ್ರಶಸ್ತಿ ಮತ್ತು ಚೆಕ್ ಮೂಲಕ ನೀಡಲಾದ 5 ಲಕ್ಷ ರೂ. ಬಹುಮಾನವನ್ನು ಹಿಂತಿರುಗಿಸುತ್ತಿದ್ದೇನೆ. ಈ ಪ್ರಕರಣವನ್ನು ಬಹಿರಂಗಪಡಿಸಲು ಶ್ರಮಿಸಿದ ಮೈಸೂರಿನ ಸರ್ಕಾರೇತರ ಸಂಸ್ಥೆಯಾದ ಒಡನಾಡಿ ಕಾರ್ಯ ಶ್ಲಾಘನೀಯ ಎಂದು ಹೇಳಿದ್ದಾರೆ.
ಮುರುಘಾಶ್ರೀಗಳ ಪ್ರಕರಣದ ತನಿಖೆಯನ್ನು ತೀವ್ರವಾಗಿ ಮುಂದುವರಿಸುವಂತೆ ಮತ್ತು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಲು ಅವಕಾಶ ನೀಡಬಾರದು ಎಂದು ನಾನು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.