ಬೆಂಗಳೂರು : ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಗೆ ಅವಾಜ್ ಹಾಕಿದ ಆರೋಪದ ಬೆನ್ನಲ್ಲೇ ಇದೀಗ ಪೊಲೀಸರು ಶಾಸಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಹಿಳೆ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆಯ ಹಿನ್ನೆಲೆ ವರ್ತೂರು ಕೆರೆಯ ಕೋಡಿ ಬಿದ್ದು ಅವಾಂತರ ಸೃಷ್ಟಿಯಾಗಿತ್ತು. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಅರವಿಂದ್ ಲಿಂಬಾವಳಿ ಭೇಟಿ ನೀಡಿದ್ದರು. ಈ ವೇಳೆ ಮಹಿಳೆಯೊಬ್ಬರು ಪತ್ರ ಹಿಡಿದು ಮನವಿ ಸಲ್ಲಿಸಲು ಬಂದಿದ್ದರು.
ಈ ವೇಳೆ ಶಾಸಕರು ಮಹಿಳೆಯ ಕೈಯಲ್ಲಿದ್ದ ಪತ್ರ ಪಡೆಯಲು ಮುಂದಾಗ್ತಾರೆ. ಇದರಿಂದ ಕೋಪಗೊಂಡ ಶಾಸಕರು, ಏ ಇವರನ್ನು ಕರ್ಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ಎಂದು ಅಲ್ಲಿದ್ದ ಸಿಬ್ಬಂದಿಗೆ ಸೂಚಿಸುತ್ತಾರೆ. ಮಹಿಳೆಯ ಕೈಯಲ್ಲಿದ್ದ ಪತ್ರವನ್ನು ಬಲವಂತವಾಗಿ ಕಸಿದುಕೊಂಡು ಅವಾಜ್ ಹಾಕಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.
ಇದೀಗ ಮಹಿಳೆ ಶಾಸಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನುವ ಆರೋಪದಡಿ ಎಫ್ ಐಆರ್ ದಾಖಲಿಸಿದ್ದು, ರೂತ್ ಎಸ್.ಸಗಾಯಿ ಮೇರಿ ವಿರುದ್ಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
BREAKING NEWS: ಸುಕೇಶ್ ಚಂದ್ರಶೇಖರ್ ವಿರುದ್ಧ ₹ 200 ಕೋಟಿ ಸುಲಿಗೆ ಪ್ರಕರಣದಲ್ಲಿ ನಟಿ ನೋರಾ ಫತೇಹಿ ಮತ್ತೆ ವಿಚಾರಣೆ