ಹೊನ್ನಾಳಿ : ಹೊನ್ನಾಳಿ ಕ್ಷೇತ್ರದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ಅವರ ಸಹೋದರರು ಭಾರೀ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ಮಾಡಿಲ್ಲ ಎಂದು ಶಾಸಕ ರೇಣುಕಾಚಾರ್ಯ ಆಣೆ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಸುರೇಂದ್ರಗೌಡ ಎಂದು ಸವಾಲ್ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊನ್ನಾಳಿ ಕ್ಷೇತ್ರಕ್ಕೆ ಕೋಟ್ಯಂತರ ಹಣ ಅನುದಾನ ಬಂದಿದೆ. ಆದರೆ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುತ್ತಿಲ್ಲ. ಭ್ರಷ್ಟಾಚಾರ ಮಾಡಿಲ್ಲ ಎಂದು ಶಾಸಕ ರೇಣುಕಾಚಾರ್ಯ ಮಾರಕೊಪ್ಪ ದೇವಸ್ಥಾನದಲ್ಲಿ ಆಣೆ ಮಾಡಲಿ ಎಂದು ಹೇಳಿದ್ದಾರೆ.
BREAKING NEWS : ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ : ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
ಹೊನ್ನಾಳಿ ಕ್ಷೇತ್ರದಲ್ಲ ಬಡ ಜನರಿಗೆ ಹಕ್ಕು ಪತ್ರ ನೀಡಲು ಹಣ ಕೇಳಲಾಗುತ್ತಿದೆ. ಸರ್ಕಾರದಿಂದ ಬೋರ್ ವೆಲ್ ಕೊರಿಸಬೇಕೆಂದರೂ ಹಣ ಕೇಳುತ್ತಿದ್ದಾರೆ. ಶಾಸಕ ರೇಣುಕಾಚಾರ್ಯ ಹಾಗೂ ಅವರ ಸಹೋದರರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.