ಬೆಂಗಳೂರು : ಸರ್ಕಾರದ ವಿರುದ್ಧಐಟಿ ಕಂಪನಿಗಳ ಆಕ್ರೋಶ ಬಗ್ಗೆ ಮಾಜಿ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ದೆ ಮಾತನಾಡಿ, ಐಟಿ ಕಂಪನಿಗಳು ಸರ್ಕಾರಕ್ಕೆ ಆದಾಯ ತಂದುಕೊಡುವ ವಲಯ, ಸರ್ಕಾರ ದುರಾಸೆ ಬಿಟ್ಟು ಕಾಮಗಾರಿ ಕೆಲಸ ಮಾಡಿಸಿ ʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಸರಿಯಾದ ಮೂಲಸೌಕರ್ಯಗಳಿಲ್ಲದೆ ಮಳೆ ಸಂದರ್ಭದಲ್ಲಿ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುವ ಮೂಲಕ ನಷ್ಟವನ್ನು ಅನುಭವಿಸುವಂತಾಗಿದೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘ (ORRCA), ಮೂಲಸೌಕರ್ಯ ಸುಧಾರಿಸದಿದ್ದರೆ ಐಟಿ ಕಂಪನಿಗಳನ್ನು ಸ್ಥಳಾಂತರಿಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮಾಜಿ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ದೆ ಮಾತನಾಡಿ, ದುರಾಸೆ ಬಿಟ್ಟು ಕಾಮಗಾರಿ ಕೆಲಸ ಮಾಡಿಸಿ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐಟಿ ಕಂಪನಿಗಳ ಸರ್ಕಾರಕ್ಕೆ ಆದಾಯ ತಂದುಕೊಡುವ ಬಹುದೊಡ್ಡ ವಲಯವಾಗಿದೆ. ಕಳಪೆ ಕಾಮಗಾರಿಯಿಂದ ಬೆಂಗಳೂರಿಗರಿಗೆ ಸಾಕಾಗಿದೆ. ದುರಾಸೆ ಬಿಟ್ಟು ಕಾಮಗಾರಿ ಕೆಲಸ ಮಾಡಿಸಿ, ಸರ್ಕಾರದ ವಿರುದ್ಧ ಸಂತೋಷ್ ಹೆಗ್ದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.