ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಜೈಲುಪಾಲಾಗಿರುವ ಮುರುಘಮಠದ ಶ್ರೀಗಳಿಗೆ ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
BIGG NEWS : ʻ ಐಟಿ ಕಂಪನಿಗಳು ಸರ್ಕಾರಕ್ಕೆ ಆದಾಯ ತಂದುಕೊಡುವ ವಲಯ ʼ: ಸರ್ಕಾರದ ವಿರುದ್ಧ ಸಂತೋಷ್ ಹೆಗ್ಡೆ ಆಕ್ರೋಶ
ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪೊಲೀಸರು ಶ್ರೀಗಳಿಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುತ್ತಿದ್ದಾರೆ.ಆದರೆ ಶ್ರೀಗಳ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಕಳೆದ ಎರಡು ತಾಸುಗಳಿಂದ ಡಿವೈಎಸ್ ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಮುರುಘಾಶ್ರೀಗಳ ವಿಚಾರಣೆ ನಡೆಸಲಾಗುತ್ತಿದೆ. ಶ್ರೀಗಳಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆ ಸುರಿಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಸಂಬಂಧ ಮುರುಘಾಶ್ರೀಗಳಿಗೆ ವಿಚಾರಣೆ ನಡೆಸಲಾಗುತ್ತಿದೆ. ಸಂತ್ರಸ್ತ ಬಾಲಕಿಯರು ನೀಡಿರುವ ಹೇಳಿಕೆ ದಾಖಲೆ ಮುಂದಿಟ್ಟು ಪೊಲೀಸ ಪ್ರಶ್ನೆಗೆ ಶ್ರೀಗಳು ಮೌನವಾಗಿದ್ದಾರೆ ಎನ್ನಲಾಗಿದೆ. ವಿಚಾರಣೆ ವೇಳೆ ಪೊಲೀಸರು ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
BIGG NEWS : ʻ ಐಟಿ ಕಂಪನಿಗಳು ಸರ್ಕಾರಕ್ಕೆ ಆದಾಯ ತಂದುಕೊಡುವ ವಲಯ ʼ: ಸರ್ಕಾರದ ವಿರುದ್ಧ ಸಂತೋಷ್ ಹೆಗ್ಡೆ ಆಕ್ರೋಶ