ಬೆಂಗಳೂರು: ಮಹಿಳೆಗೆ ನಿಂದಿಸಿದ್ದರು ಮಾಧುಸ್ವಾಮಿ ( JC Madhuswamy ), ಮಹಿಳೆಗೆ ಹಲ್ಲೆ ಮಾಡಿದ್ದರು ಸಿದ್ದು ಸವದಿ. ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು ರಮೇಶ್ ಜಾರಕಿಹೊಳಿ. ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು ಅರಗ ಜ್ಞಾನೇಂದ್ರ. ಮಹಿಳೆಯ ಮೇಲೆ ದರ್ಪ ಮೆರೆದರು ಅರವಿಂದ್ ಲಿಂಬಾವಳಿ ( Arvind Limbavali ). ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ? ಎಂಬುದಾಗಿ ರಾಜ್ಯ ಬಿಜೆಪಿಯ ( BJP Karnataka ) ವಿರುದ್ಧ, ಅರವಿಂದ್ ಲಿಂಬಾವಳಿ ನಡೆಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ( Karnataka Congress ) ವಾಗ್ಧಾಳಿ ನಡೆಸಿದೆ.
◆ ಮಹಿಳೆಗೆ ನಿಂದಿಸಿದ್ದರು ಮಾಧುಸ್ವಾಮಿ
◆ ಮಹಿಳೆಗೆ ಹಲ್ಲೆ ಮಾಡಿದ್ದರು ಸಿದ್ದು ಸವದಿ
◆ ಉದ್ಯೋಗ ಕೇಳಿದಾಕೆಯನ್ನು ಮಂಚ ಹತ್ತಿಸಿದ್ದರು ರಮೇಶ್ ಜಾರಕಿಹೊಳಿ
◆ ಅತ್ಯಾಚಾರ ಸಂತ್ರಸ್ತೆಯದ್ದೇ ತಪ್ಪು ಎಂದಿದ್ದರು ಅರಗ ಜ್ಞಾನೇಂದ್ರ
◆ ಮಹಿಳೆಯ ಮೇಲೆ ದರ್ಪ ಮೆರೆದರು ಅರವಿಂದ್ ಲಿಂಬಾವಳಿ
ಇದೇನಾ ಬಿಜೆಪಿಯ ಸ್ತ್ರೀಗೌರವದ ಸಂಸ್ಕೃತಿ?
— Karnataka Congress (@INCKarnataka) September 3, 2022
ಈ ಬಗ್ಗೆ ಸರಣಿ ಟ್ವಿಟ್ ( Twitter ) ಮಾಡಿರುವಂತ ಕಾಂಗ್ರೆಸ್, ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ ಬಿಜೆಪಿ ಸರ್ಕಾರದ ( BJP Government ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? ಎಂದು ಪ್ರಶ್ನಿಸಿದೆ.
ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ.
ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ @BJP4Karnataka.@BSBommai ಅವರೇ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ? pic.twitter.com/QFM14hve3N
— Karnataka Congress (@INCKarnataka) September 3, 2022
ಬಿಜೆಪಿಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ, ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ.. ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ? ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ? ನಳೀನ್ ಕುಮಾರ್ ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ? ಎಂದು ಕಿಡಿಕಾರಿದೆ.
'@BJP4Karnataka ಯ ಸ್ತ್ರೀಪರ ಕಾಳಜಿಯ ವೀರಾಧಿವೀರರೇ,
ಸಿಡಿ ಶೂರರೇ, ಕೋರ್ಟಿನಿಂದ ತಡೆಯಾಜ್ಞೆ ತಂದ ಧೀರರೇ..ನಿಮ್ಮ ಪಕ್ಷದ ಅರವಿಂದ್ ಲಿಂಬಾವಳಿಯ ಮಹಿಳೆ ಮೇಲಿನ ದೌರ್ಜನ್ಯಕ್ಕೆ ರೊಚ್ಚಿಗೇಳುವುದು ಯಾವಾಗ?
ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯುವುದು ಯಾವಾಗ?@nalinkateel ಅವರೇ, ಲಿಂಬಾವಳಿಯವರನ್ನು ಉಚ್ಛಾಟಿಸುವುದು ಯಾವಾಗ?— Karnataka Congress (@INCKarnataka) September 3, 2022