ಮುಂಬೈ: ಭಾರತದ ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ನಿಂದ ಹೊರಗೆ ಇರಲಿದ್ದಾರೆ ಎನ್ನಲಾಗಿದೆ.
ಗಾಯುದ ಸಮಸ್ಯೆಯಿಂದ ಬಳಲುತ್ತಿರುವ ಅವರು ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಹೌದು, ಟೀಮ್ ಇಂಡಿಯಾಗೆ ದೊಡ್ಡ ಹಿನ್ನಡೆಯಾಗಿದೆ. ಆಲ್ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ 2022ರ ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಜಡೇಜಾ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅವರು ಈಗ ಟಿ 20 ವಿಶ್ವಕಪ್ ನಂತರವಷ್ಟೇ ಮೈದಾನಕ್ಕೆ ಮರಳಲು ಸಾಧ್ಯವಾಗುತ್ತದೆ. ಅವರು ಚೇತರಿಸಿಕೊಳ್ಳಲು ಆರು ತಿಂಗಳು ತೆಗೆದುಕೊಳ್ಳಬಹುದು ಎನ್ನಲಾಗಿದೆ.