ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ( Murugha Matt ) ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದಾಖಲಾದ ಪೋಕ್ಸೋ ಕೇಸ್ ನಲ್ಲಿ ಬಂಧಿಸಲಾಗಿದೆ. ಈ ಕಾರಣದಿಂದಾಗಿ ಅವರನ್ನು ಅನಾಥಸೇವಾಶ್ರಮದ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಗೌರವ ಕಾರ್ಯದರ್ಶಿ ಪ್ರೊ.ಕೆ.ಇ ರಾಧಾಕೃಷ್ಣ ( Prof K E Radhakrishna ) ಅವರು, ದಿನಾಂಕ 03-09-2022ರಂದು ಮೈಸೂರಿನ ಮಲ್ಲಾಡಿಹಳ್ಳಿಯ ಆಶ್ರಮದ ಅಧೀನದಲ್ಲಿರುವ ಎಂ ಎ ಎಸ್ ವಿ ಎಸ್ ಗುರುಕುಲ ಪಿಯು ಕಾಲೇಜಿನಲ್ಲಿ ತುರ್ತು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧನಕ್ಕೆ ಒಳಗಾಗಿ ಕ್ರಿಮಿನಲ್ ಆಪಾದನೆಯನ್ನು ಎದುರಿಸುತ್ತಿರುವ ಶ್ರೀ ಶಿವಮೂರ್ತಿ ಮುರುಘಾಶರಣರನ್ನು ( Murugha Shivasharanru ) ತಕ್ಷಣದಿಂದ ಜಾರಿಗೆ ಬರುವಂತೆ ಅನಾಥಸೇವಾಶ್ರಮದ ಅಧ್ಯಕ್ಷಸ್ಥಾನದಿಂದ ವಿಮುಕ್ತಿಗೊಳಿಸಲಾಗಿದೆ ಎಂದಿದ್ದಾರೆ.
BIG BREAKING NEWS: ಮೈಸೂರಿನ ‘ಒಡನಾಡಿ ಸಂಸ್ಥೆ’ಯ ಮುಖ್ಯಸ್ಥರಿಗೆ ಬೆದರಿಕೆ ಕರೆ: ಪೊಲೀಸರಿಗೆ ದೂರು, ರಕ್ಷಣೆಗೆ ಮನವಿ
ಇನ್ನೂ ಇದಷ್ಟೇ ಅಲ್ಲದೇ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಸದಸ್ಯತ್ವದಿಂದಲೂ ಅಮಾನತುಗೊಳಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ಮುರುಘಾ ಶ್ರೀಗಳ ವಿರುದ್ಧ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಬಾಲಕಿಯರಿಗೆ ಲೈಂಕಿಗ ಕಿರುಕುಳ ಆರೋಪದಲ್ಲಿ ದಿನಾಂಕ 26-08-2022ರಂದು ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದಲ್ಲಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಬಳಿಕ ಅವರನ್ನು ದಿನಾಂಕ 02-09-2022ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ( Chitradurga Rural Police Station ) ಬಂಧಿಸಿದ್ದರು. ಈಗ ಅವರು ಸೆಪ್ಟೆಂಬರ್ 5ರವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ
ದೊಡ್ಡಬಳ್ಳಾಪುರದಲ್ಲಿನ ಜನೋತ್ಸವ ಮುಂದಿನ ಚುನಾವಣೆಯ ದಿಕ್ಸೂಚಿ – BJP ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್