ಬೆಂಗಳೂರು : ಲಂಚ ಪ್ರಕರಣ ಸಂಬಂಧಿಸಿದ ಆರೋಪದಡಿ ಐಎಎಸ್ ಅಧಿಕಾರಿ ಜೆ. ಮಂಜುನಾಥ್ಗೆ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯಡಿ ಸ್ಥಾಪಿತಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಲಕ್ಷ್ಮೀನಾರಾಯಣ್ ಭಟ್ ಅವರು ಶನಿವಾರ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದರು. ಲಂಚ ಸ್ವೀಕಾರ ಪ್ರಕರಣದಲ್ಲಿ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ಗೆ ನಗರದ 23ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಯು ಕಾನೂನುಬದ್ಧವಾಗಿ ಪಡೆಯಬಹುದಾದ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ, ತನಿಖಾಧಿಕಾರಿಯ ಅನುಮತಿ ಪಡೆಯದೇ ರಾಜ್ಯ ತೊರೆಯುವಂತಿಲ್ಲ. ನ್ಯಾಯಾಲಯದ ಅನಮತಿ ಇಲ್ಲದೆ ದೇಶ ತೊರೆಯುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಿದೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸುಪ್ರೀಂಕೋರ್ಟ್ನಲ್ಲಿ ಜಾಮೀನು ಅರ್ಜಿ ಬಾಕಿ ಇದ್ದರೂ, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ನಿಯಮಗಳ ಪ್ರಕಾರ ಅರ್ಜಿದಾರರು ಡಿಫಾಲ್ಟ್ ಜಾಮೀನು ಕೋರಲು ಯಾವುದೇ ನಿರ್ಬಂಧವಿಲ್ಲ ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತಿಳಿಸಿತ್ತು. ಇದರಿಂದ, ಮಂಜುನಾಥ್ ಡಿಫಾಲ್ಟ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಲಂಚ ಪ್ರಕರಣ ಪ್ರಕರಣವೇನು?
ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದಂತೆ ಅನುಕೂಲಕರ ಆದೇಶ ಮಾಡಲು ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಸೀಲ್ದಾರ್ ಆಗಿದ್ದ ಪಿ.ಎಸ್.ಮಹೇಶ್ ಹಾಗೂ ಚೇತನ್ ಕುಮಾರ್ ಅಲಿಯಾಸ್ ಚಂದ್ರ ಅವರನ್ನು ಮೇ 21ರಂದು ಎಸಿಬಿ ಬಂಧಿಸಿತ್ತು.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಇದೇ ಪ್ರಕರಣದಲ್ಲಿ ಜು.4ರಂದು ಬಂಧನಕ್ಕೊಳಗಾಗಿರುವ ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಜು.11ರಂದು ವಜಾಗೊಳಿಸಿತ್ತು. ಬಳಿಕ ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಹ ಆ.3ರಂದು ಮಂಜುನಾಥ್ಗೆ ಜಾಮೀನು ನಿರಾಸಿತ್ತು
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ