ಚಿಕ್ಕಬಳ್ಳಾಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಶನಿವಾರ ಆಯೋಜಿಸಿದ್ದ ಜನೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದ್ದಾರೆ.
BIGG NEWS : ಪೋಷಕರೊಬ್ಬರು ತಮ್ಮ ಮಗಳು ಕಾಣುತ್ತಿಲ್ಲ ಎಂದು ಮುರುಘಾಮಠಕ್ಕೆ ಬಂದಿದ್ದ ಘಟನೆಗೆ ಬಿಗ್ ಟ್ವಿಸ್ಟ್
ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಲಿದೆ. ಆ ಮೂಲಕ ಪಕ್ಷದ ಸಂಘಟನೆಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.