ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ ಹಾಗೂ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೆ. 8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ರಾಜ್ಯ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.
ಸೆಪ್ಟೆಂಬರ್ 8 ರಂದು ರಾಜ್ಯ ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಮೂಲಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 6 ಬೃಹತ್ ಸಮಾವೇಶಗಳನ್ನು ಆಯೋಜನೆ ಕುರಿತಂತೆ ಇಂದಿನ ಸಮಾಲೋಚನೆ ನಡೆಯಲಿದೆ.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಮತ್ತು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ಉಪಸ್ಥಿತಿಯಲ್ಲಿ ಇಂದು ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಸಿದರು. (1/2) pic.twitter.com/JDbU0aah2y
— BJP Karnataka (@BJP4Karnataka) September 4, 2022