ತುಮಕೂರು: ಮಾಜಿ ಸಂಸದ ಮುದ್ದಹನುಮೇಗೌಡ ( Farmer MP Muddahanumegowda ) ಅವರು ಕಾಂಗ್ರೆಸ್ ಪಕ್ಷಕ್ಕೆ ( Congress Party ) ರಾಜೀನಾಮೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ( KPCC President DK Shivakumar ) ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಈ ಬೆನ್ನಲ್ಲೇ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Nalin Kumar Kateel ) ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೇ ಬಿಜೆಪಿ ಸೇರ್ಪಡೆಗೊಳ್ಳೋದಾಗಿ ಘೋಷಣೆ ಮಾಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಬಳಿಕ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಅಸಮಾಧಾನಗೊಂಡಿದ್ದರು. ಕೆಲ ದಿನಗಳ ಹಿಂದೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತಮಗಾದಂತ ಅಸಮಾಧಾನವನ್ನು ಹೊರ ಹಾಕಿದ್ದರು. ಅಲ್ಲದೇ ಕೆಪಿಸಿಸಿ ಧ್ಯಕ್ಷ ಡಿಕೆ ಶಿವಕುಮಾರ್ ಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.
BIGG NEWS : ʻ ಅರವಿಂದ ಲಿಂಬಾವಳಿ ಒಬ್ಬ ಕಾಮುಕ ʼ: ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಧ್ಯಕ್ಷೆ ಜಯಶ್ರೀ ಕಿಡಿ
ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರ್ಪಡೆ ಆಗುತ್ತಿರೋದನ್ನು ಬಹಿರಂಗವಾಗಿಯೇ ಘೋಷಿಸಿದ್ದಾರೆ.
SHICKING NEWS: ಅಫ್ಘಾನಿಸ್ತಾನದ ಶಾಲೆಯೊಂದರಲ್ಲಿ ಸ್ಫೋಟಗೊಳ್ಳದ ಶೆಲ್ನೊಂದಿಗೆ ಆಟವಾಡ್ತಿದ್ದ 4 ಮಕ್ಕಳು ಸಾವು