ಬೆಂಗಳೂರು: ಕಾಂಗ್ರೆಸ್ನ ( Congress Party ) ಮಹತ್ವಾಕಾಂಕ್ಷೆಯ ಶಿಕ್ಷಣ ಹಕ್ಕಿನ ಕಾಯ್ದೆಯನ್ನೂ ರಾಜ್ಯ ಶಿಕ್ಷಣ ಇಲಾಖೆ ( Education Department ) ಹಳ್ಳ ಹಿಡಿಸಿದೆ. 2012ರಲ್ಲಿ ಆರ್ ಟಿ ಇ ಫಲಾನುಭವಿ ವಿದ್ಯಾರ್ಥಿಗಳು 1.20 ಲಕ್ಷ, ಈಗ ಈ ವಿದ್ಯಾರ್ಥಿಗಳ ಸಂಖ್ಯೆ 7 ಸಾವಿರಕ್ಕೆ ಇಳಿದಿದೆ. ಖಾಸಗಿ ಶಾಲೆಗಳಿಗೆ ಬಿಜೆಪಿ ಸರ್ಕಾರದಿಂದಲೇ ಬೆಂಬಲ. ಇದು ಶಿಕ್ಷಣವೋ? ಭಕ್ಷಣೆಯೋ ಬಿ ಸಿ ನಾಗೇಶ್ ಅವರೇ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಪ್ರಶ್ನಿಸಿದ್ದಾರೆ. ಅಲ್ಲದೇ ಆರ್ ಟಿ ಇ ಅಡಿಯಲ್ಲಿ ( RTE Seat ) ವಿದ್ಯಾರ್ಥಿಗಳು ದಾಖಲಾದಂತ ಶಾಕಿಂಗ್ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
BREAKING NEWS: ‘ಕರ್ನಾಟಕ -ಮಹಾರಾಷ್ಟ್ರ ಗಡಿವಿವಾದ’ದ ಬಗ್ಗೆ ಅನುಭವಿ ಕಾನೂನು ತಜ್ಞರ ನೇಮಕ – ಸಿಎಂ ಬೊಮ್ಮಾಯಿ ಘೋಷಣೆ
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವಂತ ಅವರು, ಆರ್ ಎಸ್ ಎಸ್ ನಲ್ಲಿ ತರಬೇತಿ ಪಡೆದು ಬಂದಿರುವ ಬಿ.ಸಿ ನಾಗೇಶ್ ಅವರು ರಾಜ್ಯ ಶಿಕ್ಷಣ ಸಚಿವರಾದಂದಿನಿಂದ ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿರುವ ಕತೆ ಒಂದೊಂದಾಗಿ ಹೊರಬೀಳುತ್ತಿವೆ. ಪಠ್ಯಪುಸ್ತಕಗಳ ವಿವಾದದ ಮರೆಯಲ್ಲಿ ಇಲ್ಲಿ ನಡೆಯುತ್ತಿರುವುದು ಲಂಚಾವತಾರದ ಕುಣಿದಾಟ ಎಂದಿದ್ದಾರೆ.
ಆರ್ ಎಸ್ ಎಸ್ ನಲ್ಲಿ ತರಬೇತಿ ಪಡೆದು ಬಂದಿರುವ @BCNagesh_bjp ಅವರು ರಾಜ್ಯ ಶಿಕ್ಷಣ ಸಚಿವರಾದಂದಿನಿಂದ ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆಯಾಗಿರುವ ಕತೆ ಒಂದೊಂದಾಗಿ ಹೊರಬೀಳುತ್ತಿವೆ. ಪಠ್ಯಪುಸ್ತಕಗಳ ವಿವಾದದ ಮರೆಯಲ್ಲಿ ಇಲ್ಲಿ ನಡೆಯುತ್ತಿರುವುದು ಲಂಚಾವತಾರದ ಕುಣಿದಾಟ.
ಇದು ಶಿಕ್ಷಣವೋ? ಭಕ್ಷಣೆಯೋ? 1/7#ಭಕ್ಷಣಾಸಚಿವ pic.twitter.com/9YtLAfWUxv
— Siddaramaiah (@siddaramaiah) September 4, 2022
ಪ್ರಾರಂಭದಿಂದಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ಕೇಳಿ ಬರುತ್ತಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಈಗ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಂಘಟನೆ ಪುರಾವೆಗಳನ್ನು ನೀಡಿದೆ. ಈ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆಯಂತೆ ಎಂದು ಹೇಳಿದ್ದಾರೆ.
ಪ್ರಾರಂಭದಿಂದಲೇ ಶಿಕ್ಷಣ ಸಚಿವ @BCNagesh_bjp ವಿರುದ್ಧ ಕೇಳಿ ಬರುತ್ತಿದ್ದ ಭ್ರಷ್ಟಾಚಾರದ ಆರೋಪಗಳಿಗೆ ಈಗ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಸಂಘಟನೆ ಪುರಾವೆಗಳನ್ನು ನೀಡಿದೆ. ಈ ಸಂಘಟನೆ ಪ್ರಧಾನಿ @narendramodi ಅವರಿಗೂ ಪತ್ರ ಬರೆದಿದೆಯಂತೆ.
ಇದು ಶಿಕ್ಷಣವೋ? ಭಕ್ಷಣೆಯೋ? 2/7#ಭಕ್ಷಣಾಸಚಿವ pic.twitter.com/yZCY33EGU5
— Siddaramaiah (@siddaramaiah) September 4, 2022
ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗುತ್ತಿಲ್ಲವಂತೆ. ಲಂಚ ಪಡೆದು ಖಾಸಗಿ ಶಾಲೆಗಳಿಗೆ ಅಕ್ರಮವಾಗಿ ಅನುಮತಿ ನೀಡುವ ಇಲಾಖೆಯೇ, ಮತ್ತೆ ಅಕ್ರಮ ಎಸಗಿದ ಆರೋಪದ ಮೇಲೆ ದುಡ್ಡು ವಸೂಲಿ ಮಾಡುತ್ತಿದೆಯಂತೆ. ಎಂಥಾ ಅದ್ಭುತ ಪ್ಲಾನ್? ಇದು ಶಿಕ್ಷಣವೋ? ಭಕ್ಷಣೆಯೋ? ಎಂದು ಪ್ರಶ್ನಿಸಿದ್ದಾರೆ.
ಖಾಸಗಿ ಶಾಲೆಗಳ ಪರವಾನಿಗೆಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೆ ಯಾವ ಕೆಲಸವೂ ಆಗುತ್ತಿಲ್ಲವಂತೆ. ಲಂಚ ಪಡೆದು ಖಾಸಗಿ ಶಾಲೆಗಳಿಗೆ ಅಕ್ರಮವಾಗಿ ಅನುಮತಿ ನೀಡುವ ಇಲಾಖೆಯೇ, ಮತ್ತೆ ಅಕ್ರಮ ಎಸಗಿದ ಆರೋಪದ ಮೇಲೆ ದುಡ್ಡು ವಸೂಲಿ ಮಾಡುತ್ತಿದೆಯಂತೆ. ಎಂಥಾ ಅದ್ಭುತ ಪ್ಲಾನ್?
ಇದು ಶಿಕ್ಷಣವೋ? ಭಕ್ಷಣೆಯೋ? 3/7— Siddaramaiah (@siddaramaiah) September 4, 2022
ಕಾಂಗ್ರೆಸ್ನ ಮಹತ್ವಾಕಾಂಕ್ಷೆಯ ಶಿಕ್ಷಣ ಹಕ್ಕಿನ ಕಾಯ್ದೆಯನ್ನೂ ರಾಜ್ಯ ಶಿಕ್ಷಣ ಇಲಾಖೆ ಹಳ್ಳ ಹಿಡಿಸಿದೆ. 2012ರಲ್ಲಿ ಆರ್ ಟಿ ಇ ಫಲಾನುಭವಿ ವಿದ್ಯಾರ್ಥಿಗಳು 1.20 ಲಕ್ಷ, ಈಗ ಈ ವಿದ್ಯಾರ್ಥಿಗಳ ಸಂಖ್ಯೆ 7 ಸಾವಿರಕ್ಕೆ ಇಳಿದಿದೆ. ಖಾಸಗಿ ಶಾಲೆಗಳಿಗೆ ಬಿಜೆಪಿ ಸರ್ಕಾರದಿಂದಲೇ ಬೆಂಬಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ನ ಮಹತ್ವಾಕಾಂಕ್ಷೆಯ ಶಿಕ್ಷಣ ಹಕ್ಕಿನ ಕಾಯ್ದೆಯನ್ನೂ ರಾಜ್ಯ ಶಿಕ್ಷಣ ಇಲಾಖೆ ಹಳ್ಳ ಹಿಡಿಸಿದೆ. 2012ರಲ್ಲಿ ಆರ್ ಟಿ ಇ ಫಲಾನುಭವಿ ವಿದ್ಯಾರ್ಥಿಗಳು 1.20 ಲಕ್ಷ, ಈಗ ಈ ವಿದ್ಯಾರ್ಥಿಗಳ ಸಂಖ್ಯೆ 7 ಸಾವಿರಕ್ಕೆ ಇಳಿದಿದೆ. ಖಾಸಗಿ ಶಾಲೆಗಳಿಗೆ @BJP4Karnataka ಸರ್ಕಾರದಿಂದಲೇ ಬೆಂಬಲ.
ಇದು ಶಿಕ್ಷಣವೋ? ಭಕ್ಷಣೆಯೋ @BCNagesh_bjp? 4/7— Siddaramaiah (@siddaramaiah) September 4, 2022
ಆರ್ ಟಿ ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ಬಿಜೆಪಿ ಸರ್ಕಾರ ಸುಮಾರು ರೂ.900 ಕೋಟಿ ಬಾಕಿ ಪಾವತಿಸಬೇಕಂತೆ. ಶಿಕ್ಷಣ ಸಚಿವರು 40% ಕಮಿಷನ್ ಲೆಕ್ಕ ಹಾಕುತ್ತಿರುವಂತೆ ಕಾಣುತ್ತಿದೆ. ಕಮಿಷನ್ ಎಂಬ ಸಾಂಕ್ರಾಮಿಕ ರೋಗ ಶಿಕ್ಷಣ ಇಲಾಖೆಯನ್ನೂ ರೋಗಗ್ರಸ್ತ ಗೊಳಿಸಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.
ಆರ್ ಟಿ ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ @BJP4Karnataka ಸರ್ಕಾರ ಸುಮಾರು ರೂ.900 ಕೋಟಿ ಬಾಕಿ ಪಾವತಿಸಬೇಕಂತೆ.
ಶಿಕ್ಷಣ ಸಚಿವರು 40% ಕಮಿಷನ್ ಲೆಕ್ಕ ಹಾಕುತ್ತಿರುವಂತೆ ಕಾಣುತ್ತಿದೆ. ಕಮಿಷನ್ ಎಂಬ ಸಾಂಕ್ರಾಮಿಕ ರೋಗ ಶಿಕ್ಷಣ ಇಲಾಖೆಯನ್ನೂ ರೋಗಗ್ರಸ್ತ ಗೊಳಿಸಿದೆ.ಇದು ಶಿಕ್ಷಣವೋ? ಭಕ್ಷಣೆಯೋ @BCNagesh_bjp? 5/7#ಭಕ್ಷಣಾಸಚಿವ pic.twitter.com/aNOBsMTD8e
— Siddaramaiah (@siddaramaiah) September 4, 2022
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ತಮ್ಮ ಇಲಾಖೆಯ ಲಂಚಾವತಾರದ ಕಡೆಗಿನ ಜನರ ಗಮನ ಬೇರೆಕಡೆ ಸೆಳೆಯಲಿಕ್ಕಾಗಿಯೇ ಪಠ್ಯಪುಸ್ತಕ, ಭಗವದ್ಗೀತೆ, ಮದರಸಾಕ್ಕೆ ಸಂಬಂಧಿಸಿದ ವಿವಾದ ಹುಟ್ಟುಹಾಕುತ್ತಿದ್ದಾರೆ. ಲಂಚಕೋರರಿಗೆ ಮುಖ ಮರೆಸಿಕೊಳ್ಳಲು ಹಿಂದುತ್ವ ಒಂದು ಮುಖವಾಡ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ @BCNagesh_bjp ಅವರು ತಮ್ಮ ಇಲಾಖೆಯ ಲಂಚಾವತಾರದ ಕಡೆಗಿನ ಜನರ ಗಮನ ಬೇರೆಕಡೆ ಸೆಳೆಯಲಿಕ್ಕಾಗಿಯೇ ಪಠ್ಯಪುಸ್ತಕ, ಭಗವದ್ಗೀತೆ, ಮದರಸಾಕ್ಕೆ ಸಂಬಂಧಿಸಿದ ವಿವಾದ ಹುಟ್ಟುಹಾಕುತ್ತಿದ್ದಾರೆ. ಲಂಚಕೋರರಿಗೆ ಮುಖ ಮರೆಸಿಕೊಳ್ಳಲು ಹಿಂದುತ್ವ ಒಂದು ಮುಖವಾಡ.
ಇದು ಶಿಕ್ಷಣವೋ? ಭಕ್ಷಣೆಯೋ? 6/7#ಭಕ್ಷಣಾಸಚಿವ
— Siddaramaiah (@siddaramaiah) September 4, 2022
ಗುತ್ತಿಗೆದಾರರು ಸರ್ಕಾರದ 40% ಕಮಿಷನ್ ಬಗ್ಗೆ ಪ್ರಧಾನಿಗೆ ಬರೆದ ಪತ್ರಗಳಿಗೆ ಉತ್ತರ ಸಿಕ್ಕಿಲ್ಲ. ಈಗ ಖಾಸಗಿ ಶಾಲೆಗಳ ಆಡಳಿತವೂ ಪ್ರಧಾನಿಗೆ ಪತ್ರ ಬರೆದಿದೆಯಂತೆ. ಮುಖ್ಯಮಂತ್ರಿ ಈ ಎಲ್ಲ ಪತ್ರಗಳ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನಿಗಾವಣೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಗುತ್ತಿಗೆದಾರರು ಸರ್ಕಾರದ 40% ಕಮಿಷನ್ ಬಗ್ಗೆ ಪ್ರಧಾನಿಗೆ ಬರೆದ ಪತ್ರಗಳಿಗೆ ಉತ್ತರ ಸಿಕ್ಕಿಲ್ಲ. ಈಗ ಖಾಸಗಿ ಶಾಲೆಗಳ ಆಡಳಿತವೂ ಪ್ರಧಾನಿಗೆ ಪತ್ರ ಬರೆದಿದೆಯಂತೆ. @CMofKarnataka ಈ ಎಲ್ಲ ಪತ್ರಗಳ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರ ನಿಗಾವಣೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಬೇಕೆಂದು ಒತ್ತಾಯಿಸುತ್ತೇನೆ.
ಇದು ಶಿಕ್ಷಣವೋ? ಭಕ್ಷಣೆಯೋ? 7/7 pic.twitter.com/SCh4iXb4zW— Siddaramaiah (@siddaramaiah) September 4, 2022