ಬಾಗಲಕೋಟೆ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನಗಳ ಖರೀದಿ ಪ್ರಕ್ರಿಯೆ ಸೆಪ್ಟೆಂಬರ 5 ರಿಂದ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷರಾದ ಪಿ.ಸುನೀಲ್ಕುಮಾರ ತಿಳಿಸಿದ್ದಾರೆ.
ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ
ಹೆಸರುಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ 7755 ರೂ.ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಟ ಪ್ರಮಾಣ ಪ್ರತಿ ರೈತರಿಂದ 15 ಕ್ವಿಂಟಲ್ ಖರೀದಿಸಲಾಗುತ್ತದೆ. ನೊಂದಣಿ ಕಾರ್ಯ ಸೆಪ್ಟೆಂಬರ 5 ರಿಂದ ಅಕ್ಟೋಬರ 3 ವರೆಗೆ ಹಾಗೂ ಖರೀದಿ ಪ್ರಕ್ರಿಯೆ ಸೆಪ್ಟೆಂಬರ 5 ರಿಂದ ನವೆಂಬರ 27 ವರೆಗೆ ನಿಗಧಿಪಡಿಸಲಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಖರೀದಿ ಕೇಂದ್ರಗಳಲ್ಲಿ ರೈತರ ಹೆಸರು ನೋಂದಾಯಿಸಿಕೊಳ್ಳಲು ಆಧಾರ ಕಾರ್ಡ ಪ್ರತಿ, ರೈತರಿಗೆ ಸಂಬಂಧಿಸಿದ ಏಪ್.ಐ.ಡಿ ಹಾಗೂ ಪಹಣಿಯನ್ನು ಸಲ್ಲಿಸಿ ಹೆಸರು ನೋಂದಾಯಿಸಬೇಕು. ಹೆಸರುಕಾಳು ಉತ್ಪನ್ನವನ್ನು ಖರೀದಿಸುವ ಪೂರ್ವದಲ್ಲಿ ರೈತರು ನೀಡಿರುವ ವಿವರವನ್ನು ಎನ್ಐಸಿ ಸಂಸ್ಥೆಯ ತಂತ್ರಾಂಶದೊಂದಿಗೆ ಭೂಮಿ ಯುಐಡಿಎಐ ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ಪರಿಶೀಲಿಸಿದ ನಂತರ ನೋಂದಾಯಿಸಿಕೊಳ್ಳಲಾಗುತ್ತದೆ. ಒಂದು ವೇಳೆ ದರ್ಶಕದಲ್ಲಿ ಬೆಳೆ ಬೆಳೆಯದೇ ಇರುವುದು ಕಂಡುಬಂದಲ್ಲಿ ರೈತರು ಹತ್ತಿರದ ಕೃಷಿ ಇಲಾಖೆ ಸಂಪರ್ಕಿಸಿ ಆಕ್ಷೇಪಣೆಯನ್ನು ಸಲ್ಲಿಸಿ ಬೆಳೆ ದರ್ಶಕದಲ್ಲಿ ಬೆಳೆಯನ್ನು ನಮೂದಿಸಿಕೊಂಡು ಹೆಸರು ನೋಂದಾಯಿಸಿಕೊಳ್ಳತಕ್ಕದ್ದು.
Asia Cup 2022: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್ ಬೌಲಿಂಗ್ ಆಯ್ಕೆ
ಜಿಲ್ಲೆಯ ಎಲ್ಲ ರೈತರು ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಂಡು ಈ ಯೋಜನೆಯ ಸದುಪಯೋಗ ಪಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆಯಾ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ, ಕ.ರಾ.ಸ.ಮಾ.ಮಂನಿ ಶಾಕಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದಾಗಿದೆ.