ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಶ್ವಾನ ʻಗೀತಾ’ಗೆ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು 11.56 ಸೆಂ.ಮೀ ನಿಂದ 30.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Good News : ನಿವೇಶನ ರಹಿತ ಬಡಜನತೆಗೆ ಗುಡ್ ನ್ಯೂಸ್ : ಅಪಾರ್ಟ್ ಮೆಂಟ್ ಖರೀದಿಗೆ 5 ಲಕ್ಷ ರೂ. ನೆರವು!
ಸೋಮವಾರದಿಂದ ಮಂಗಳವಾರದವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು, ಹಾಸನ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,ನಾಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ.6 ರಿಂದ 8 ರವರೆಗೆ ಬೀದರ್ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ,ಹಾವೇರಿ,ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.