ಬೆಂಗಳೂರು: ರಾಜ್ಯದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗುತ್ತಿದ್ದರೆ. ಈ ಜಡಿ ಮಳೆಗೆ ಇಡೀ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಇಂದು ಸಹ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಲಾಗಿದೆ. ಹೀಗಾಗಿ 18 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
BIGG NEWS: ರಾತ್ರೀಡಿ ಸುರಿದ ಮಳೆಗೆ ನಲುಗಿದ ಬೆಂಗಳೂರು; ಇಂದಿರಾನಗರದಲ್ಲಿ 100ಕ್ಕೂ ಹೆಚ್ಚು ಮನೆಗೆ ನುಗ್ಗಿದ ನೀರು
ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕ ದಲ್ಲಿ ಭಾರಿ ಮಳೆಯಾಗುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ,ಹಾಸನ ಸೇರಿದಂತೆ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ಈಗಾಗಲೇ ಮಳೆಯಿಂದ ರಸ್ತೆಗಳೆಲ್ಲ ಕೆರೆಯಂತಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು , ಜನರೆಲ್ಲ ಹೈರಾಣಾಗಿದ್ದಾರೆ.