ಬೆಂಗಳೂರು: ನಗರದಲ್ಲಿ ಎಡಬಿಡದೇ ಸುರಿಯುತ್ತಿರುವಂತ ಮಳೆಯಿಂದಾಗಿ ಸಿಲಿಕಾನ್ ಸಿಟಿ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಐಎಂಡಿ, ಬೆಂಗಳೂರಿನಲ್ಲಿ ಇನ್ನೂ ಮೂರುಗಂಟೆ ಭಾರೀ ಮಳೆಯಲಾಗಿದೆ. ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದೆ.
ಅಂದಹಾಗೇ ಜುಲೈ 1ರಿಂದ ಸೆಪ್ಟೆಂಬರ್ 3ರವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಗಿದೆ. 303 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದ್ರೇ ಆಗಿದ್ದು ಮಾತ 643 ಮಿಲಿ ಮೀಟರ್ ಹೆಚ್ಚು ಮಳೆಯಾಗಿದೆ. ಈ ಮೂಲಕ ಭಾರೀ ವರ್ಷಧಾರೆಯೇ ಸುರಿದಿದೆ ಎಂದು ಹೇಳಿದೆ.
ಈಗಾಗಲೇ ನಗರದ ಮೆಜೆಸ್ಟಿಕ್, ಶಿವಾಜಿನಗರ, ಮಲ್ಲೇಶ್ವರಂ, ಫ್ರೆಜರ್ ಟೌನ್, ಶಾಂತಿನಗರ ಸೇರಿದಂತೆ ಹಲವೆಡೆ ಮಳೆ ಆರಂಭಗೊಂಡಿದೆ. ಭಾರೀ ಮಳೆ ಸುರಿಯುವ ಕಾರಣ ರಾಜಧಾನಿ ಜನತೆ ಮನೆಯಿಂದ ಹೊರಗೆ ಬರೋ ಮುನ್ನಾ ಎಚ್ಚರಿಕೆ ವಹಿಸಬೇಕಿದೆ.