ಮಡಿಕೇರಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ (ಹೊಸತು), ಅರಿವು-ಶೈಕ್ಷಣಿಕ ಸಾಲ ಯೋಜನೆ(ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಲ್ಲಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
2022-23 ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು): ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ. ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಸೆಪ್ಟೆಂಬರ್, 6 ರಿಂದ ಅಕ್ಟೋಬರ್, 20 ರ ವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ ನಲ್ಲಿ ಸಲ್ಲಿಸಬಹುದಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ): ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಈಗಾಗಲೇ ಈ ನಿಗಮಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು ಉಳಿದ 03 ಮತ್ತು 04 ಕಂತುಗಳ ಸಾಲ ಬಿಡುಗಡೆಗಾಗಿ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ನಲ್ಲಿ ಸಲ್ಲಿಸಬಹುದಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಮ್ಯಾನೇಜ್ಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಮತ್ತು ಅಲೈಡ್ ಸೈನ್ಸ್ಸ್/ ಟೆಕ್ನಾಲಜಿ, ಮೆಡಿಸಿನ್ ಮತ್ತು ಹ್ಯುಮ್ಯಾನಿಟೀಸ್ ಮತ್ತು ಸೊಶಿಯಲ್ ಸೈನ್ಸ್ಸ್ (ಈ 06 ಕೋರ್ಸ್ಗಳ, ಕ್ಷೇತ್ರಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುತ್ತದೆ.) ಈ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷಗಳಂತೆ ಮೂರು ವರ್ಷಗಳ ಅವಧಿಗೆ ರೂ.15 ಲಕ್ಷಗಳ ಸಾಲವನ್ನು ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ವಿದ್ಯಾರ್ಥಿಗಳು ಅಕ್ಟೋಬರ್, 20 ರ ವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ನಲ್ಲಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆಯೇ ವಿದ್ಯಾರ್ಥಿಗಳ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಯೋಜನೆಗಳಲ್ಲಿ ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ https://www.dbcdc.karnataka.gov.in ನಲ್ಲಿ ಅಥವಾ ಸಂಬಂಧಪಟ್ಟ ನಿಗಮದ ವೆಬ್ಸೈಟ್ನ್ನು ಅಥವಾ ನಿಗಮದ ಕೇಂದ್ರ ಕಚೇರಿ ದೂರವಾಣಿ/ ಸಹಾಯವಾಣಿ ಸಂಖ್ಯೆ: 080-22374832 ಮತ್ತು 9606066389 ಅಥವಾ 8824300400 ಅಥವಾ ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಮಡಿಕೇರಿ ದೂರವಾಣಿ ಸಂಖ್ಯೆ: 08272-221656 ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೆ.ಮಹಾದೇವಿ ಅವರು ತಿಳಿಸಿದ್ದಾರೆ.