ಬೆಂಗಳೂರು: ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ಯೋಜನೆ ವಾಪಾಸ್ ಪಡೆದ ನಂತ್ರ, ರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಕೃಷಿ ಪಂಪ್ ಸೆಟ್ ಗಳ ಉಚಿತ ವಿದ್ಯುತ್ ಯೋಜನೆಯ ಮಿತಿಗೆ ಮೀಟರ್ ಅಳವಡಿಕೆಯಿಲ್ಲ ಎಂಬುದಾಗಿ ಇಂಧನ ಸಚಿವ ವಿ.ಸುನೀಲ್ ಕುಮಾರ್ ( Minister V Sunil Kumar ) ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆ ಮಿತಿಗಾಗಿ ಮೀಟರ್ ಅಳವಡಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಎಸ್ಕಾಂ ಗಳಿಗೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ ಹಿಂದೆ ಸರಿಯಲ್ಲ ಎಂಬುದಾಗಿ ಹೇಳಿದ್ದಾರೆ.
ನಾವು ರೈತರಿಗೆ ಸೈಲಭ್ಯ ಕಲ್ಪಿಸುವ ವಿಚಾರದಲ್ಲಿ ಹಿಂದೆ ಸರಿಯಲ್ಲ. ಯಾವುದೇ ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಬಳಕೆ ಸಂಬಂಧ ಮೀಟರ್ ಅಳವಡಿಕೆ ಮಾಡೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ವಿಪಕ್ಷ ನಾಯಕ ಸಿದ್ಧರಾಮಯ್ಯ, ರಾಜ್ಯ ಸರ್ಕಾರ ಕೃಷಿ ಪಂಪ್ಸೆಟ್ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ( Free Electricity Scheme ) ಸ್ಥಗಿತಗೊಳಿಸಿರುವುದನ್ನು ಖಂಡಿಸಿದ್ದರು.