ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ನೆರೆಹಾನಿ ಪರಿಹಾರಕ್ಕೆ ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಈ ವೇಳೆ ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ರೂ. ಹಾಗೂ ರಾಜ್ಯದ ಉಳಿದ ಭಾಗಕ್ಕೆ 300 ಕೋಟಿ ರೂ. ಬಿಡುಗಡೆಗೆ ಆದೇಶಿಸಿದ್ದಾರೆ.
ಪೊಲೀಸ್ ಕಾನ್ಸ್ ಟೇಬಲ್, ಸಬ್ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಪ್ರವಾಹ ಪೀಡಿತ ಜಿಲ್ಲೆಗಳಿಗೆ ತುರ್ತಾಗಿ 600 ಕೋಟಿ ರೂ. ಘೋಷಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಪರಿಹಾರ ಕಾರ್ಯ ಕೈಗೊಳ್ಳುವ ಸಂಬಂಧ ಬೆಂಗಳೂರಿಗೆ 300 ಕೋಟಿ ರೂ. ಇನ್ನುಳಿದಂತೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ 300 ಕೋಟಿ ರೂ.ಒದಗಿಸಲಾಗಿದೆ. ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಆಸ್ತಿ ಹಾನಿಯ ಜೊತೆಗೆ ಬೆಳೆ ಹಾನಿಯಾಗಿದ್ದು, ಪರಿಹಾರ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ತಂಡ ಬುಧವಾರ ರಾಜ್ಯಕ್ಕೆ ಆಗಮಿಸುತ್ತಿದೆ ಎಂದು ತಿಳಿಸಿದ್ದಾರೆ.