ಬೆಂಗಳೂರು : ಬೆಂಗಳೂರು ನಗರದಲ್ಲಿ ಮಹಾಮಳೆಗೆ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮಾರತ್ತಹಳ್ಳಿ-ವರ್ತೂರು ಕೋಡಿ ಮಾರ್ಗ ಮಧ್ಯೆಯಿರುವ ಸಿದ್ದಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ಬಿಕಾಂ ಪದವೀಧರೆ ಅಖಿಲಾ (23) ಸಾವನ್ನಪ್ಪಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ. ನಿನ್ನೆ ರಾತ್ರಿ 9.30 ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಬೆಸ್ಕಾಂ ನಿರ್ಲಕ್ಷ್ಯವೇ ತಮ್ಮ ಮಗಳ ಸಾವಿಗೆ ಕಾರಣ ಎಂದು ಅಖಿಲಾ ಪೋಷಕರು ಆರೋಪಿಸಿದ್ದಾರೆ. ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓದುಗರೇ ಗಮನಿಸಿ: ಗ್ರಾಮ ಒನ್ ಕೇಂದ್ರದಲ್ಲಿ ಸಿಗಲಿದೆ, ಈ ಎಲ್ಲಾ ಸೇವೆಗಳು