ಬೆಂಗಳೂರು: ಸಿಇಟಿ ರ್ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಮ್ಮ ನಿವಾಸದಲ್ಲಿ ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಸಭೆಯಲ್ಲಿ ಏಕ ಸದಸ್ಯ ಪೀಠದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ.
ಸಭೇ ಬಳಿಕ ಮಾತನಾಡಿದ ಅಶ್ವತ್ಥ್ ನಾರಾಯಣ, ಈ ಆದೇಶದಿಂದಾಗಿ ಹೊಸ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಪರಿಗಣಿಸಿ, ಅದನ್ನು ಪ್ರಶ್ನಿಸಲು ಸರ್ಕಾರ ನಿರ್ಧರಿಸಿದೆ.ವಕೀಲರು ಒಂದೇ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸುತ್ತಾರೆ ಅಥವಾ ದ್ವಿಸದಸ್ಯ ಪೀಠದ ಮುಂದೆ ಹೋಗುತ್ತಾರೆ ಎಂದು ಅವರು ಹೇಳಿದರು.
2022-23ನೇ ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನದಲ್ಲಿ ಪದವಿಪೂರ್ವ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಶ್ರೇಯಾಂಕವನ್ನು 50:50 ರ ಅನುಪಾತದಲ್ಲಿ ಪಿಯು ಮತ್ತು ಸಿಇಟಿ ಅಂಕಗಳನ್ನು ಪರಿಗಣಿಸುವ ಮೂಲಕ ಮರುರೂಪಿಸಲು ಹೈಕೋರ್ಟ್ ಶನಿವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.