ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಮಳೆಯ ಅಬ್ಬರಕ್ಕೆ ಪ್ರಸಿದ್ಧ ಪ್ರವಾಸಿತಾಣ ನಂದಿಬೆಟ್ಟದ ಎರಡು ಕಡೆಗಳಲ್ಲಿ ಗುಡ್ಡ ಕುಸಿತಗೊಂಡಿದೆ.
BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು& ಸುಳ್ಯದ 32 ಕಡೆ NIA ದಾಳಿ
ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ ಮೆಟ್ಟಿಲು ಮಾರ್ಗದ ಕಡೆ ವೀರಭದ್ರ ಸ್ವಾಮಿ ದೇಗುಲದ ಭಾಗದಲ್ಲಿ ಭೂ ಕುಸಿತ ಆಗಿದೆ. ನ್ನೂ ಇದೇ ಸುಲ್ತಾನಪೇಟೆ ಗ್ರಾಮದ ಕಡೆ ಮತ್ತದು ಭಾಗದಲ್ಲಿ ಭೂ ಕುಸಿತ ಆಗಿದೆ. ಬೃಹತ್ ಗಾತ್ರದ ಕಲ್ಲು ಬಂಡೆಗಳು ಮರಗಳು ಮಣ್ಣು ಸಮೇತ ಕೊಚ್ಚಿಕೊಂಡು ಬಂದಿವೆ.ಇದರಿಂದ ಜನರಿಗೆ ಆತಂಕ ಸೃಷ್ಟಿಯಾಗಿದೆ. ಕಲ್ಲು ಬಂಡೆಗಳು ಉರುಳಿ ಗ್ರಾಮಕ್ಕೆ ಬರುವ ಭೀತಿಯಲ್ಲಿದ್ದಾರೆ.