ಬೆಂಗಳೂರು: ಮುಳುಗುವುದರಲ್ಲಿ ಹಲವು ವಿಧಗಳಿವೆ! ರಾಜ್ಯದ ಜನ ಮಳೆಯಲ್ಲಿ ( Bengaluru Rain ) ಮುಳುಗಿದ್ದಾರೆ, ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ! ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಚಿವ R ಅಶೋಕ್ ( Minister R Ashok ) ಅವರ ಭರ್ಜರಿ ನಿದ್ದೆ. ‘ಹಲಾಲ್ ಕಟ್’ ಎಂದರೆ ಥಟ್ನೆ ಎಚ್ಚರಾಗುತ್ತಾರೆ! ‘ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ’ ಎಂಬ ಮಾತು ಸಚಿವರಿಗೇ ಹೇಳಿದ್ದೇನೋ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ.
ಮುಳುಗುವುದರಲ್ಲಿ ಹಲವು ವಿಧಗಳಿವೆ!
ರಾಜ್ಯದ ಜನ ಮಳೆಯಲ್ಲಿ ಮುಳುಗಿದ್ದಾರೆ,
ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ!ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಚಿವ @RAshokaBJP ಅವರ ಭರ್ಜರಿ ನಿದ್ದೆ.
'ಹಲಾಲ್ ಕಟ್' ಎಂದರೆ ಥಟ್ನೆ ಎಚ್ಚರಾಗುತ್ತಾರೆ!'ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ' ಎಂಬ ಮಾತು ಸಚಿವರಿಗೇ ಹೇಳಿದ್ದೇನೋ! pic.twitter.com/e11pzCibwZ
— Karnataka Congress (@INCKarnataka) September 6, 2022
ಈ ಕುರಿತಂತೆ ಟ್ವಿಟ್ ( Twitter ) ಮಾಡಿರುವಂತ ಕಾಂಗ್ರೆಸ್, ಮತಿ ‘ದೋಷ’ ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ ‘ದೋಸೆ’ ತಿನ್ನಲು ಹೋಗುತ್ತಾರೆ! ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ( MP Tejasvi Surya ) ಅವರು ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ! ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಪ್ರಶ್ನಿಸಿದೆ.
ಮತಿ 'ದೋಷ' ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ 'ದೋಸೆ' ತಿನ್ನಲು ಹೋಗುತ್ತಾರೆ!
ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ @Tejasvi_Surya ಅವರು ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ!
ಮಕ್ಕಳಾಟ ಆಡಿಕೊಂಡಿದ್ದ ಅಪ್ರಬುದ್ಧರನ್ನು ಸಂಸದರನ್ನಾಗಿಸಿದರೆ ಇನ್ನೇನು ನಿರೀಕ್ಷಿಸಲು ಸಾಧ್ಯ? pic.twitter.com/jOoLh3FcpD
— Karnataka Congress (@INCKarnataka) September 6, 2022