ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ( Karnataka Government ) ಸಂಬಂಧಿಸಿದಂತ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ( Kannada Mandatory ) ಸರ್ಕಾರ ಆದೇಶಿಸಿದೆ. ಈ ಮೂಲಕ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ( Government Program ) ಕನ್ನಡ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.
BREAKING : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: 5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು
ಈ ಸಂಬಂಧ ರಾಜ್ಯ ಸರ್ಕಾರದ ( Karnataka Government ) ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ( CS Vandita Sharma ) ಸುತ್ತೋಲೆ ಹೊರಡಿಸಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿ ಪತ್ರವನ್ನು ಬರೆಯಲಾಗಿದೆ. ಈ ಬಗ್ಗೆ ವೇದಿಕೆ ಮೇಲೆ ಅಳವಡಿಸಲಾಗುವ ಪರದೆಗಳಲ್ಲಿ ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡುವಂತೆ ಕೋರಿದೆ ಎಂದಿದ್ದಾರೆ.
ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆ ಅನ್ವಯ ಇನ್ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿ ಆದೇಶಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ
BIG NEWS: ಬೆಂಗಳೂರಿನಲ್ಲಿ ‘ಬೆಸ್ಕಾಂ ನಿರ್ಲಕ್ಷ್ಯ’ದಿಂದ ಯುವತಿ ಮೃತಪಟ್ಟಿಲ್ಲ – BESCOM ಸ್ಪಷ್ಟನೆ