ನವದೆಹಲಿ : ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಮಂಗಳವಾರ ತಮ್ಮ ಶಸ್ತ್ರಚಿಕಿತ್ಸೆಯ ಬಗ್ಗೆ ಅಪ್ಡೇಟ್ ಹಂಚಿಕೊಂಡಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಜಡೇಜಾ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಶುಭ ಕೋರಿದ ಅಭಿಮಾನಿಗಳಿಗೆ ಧನ್ಯವಾದಗಳು ಎಂದಿದ್ದಾರೆ.
https://www.instagram.com/p/CiKo5RTKakq/?utm_source=ig_web_copy_link
ಏಷ್ಯಾ ಕಪ್ನ ಮೊದಲ ಎರಡು ಪಂದ್ಯಗಳ ನಂತ್ರ ಮೊಣಕಾಲಿನ ಗಾಯದಿಂದಾಗಿ ಏಷ್ಯಾಕಪ್ ಮುಂದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಟಿ20 ವಿಶ್ವಕಪ್ನಿಂದ್ಲು ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಆದ್ರೆ, ಬಿಸಿಸಿಐ ಸುದ್ದಿಯನ್ನ ದೃಢಪಡಿಸಿಲ್ಲ.