ಬೆಂಗಳೂರು: ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ( Minister Umesh Katti No More ) ಇಂದು ನಿಧನರಾಗಿದ್ದಾರೆ. ಈ ಮೂಲಕ ಸಚಿವ ಉಮೇಶ್ ಕತ್ತಿ ಇನ್ನಿಲ್ಲವಾಗಿದ್ದಾರೆ. ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಸಂತಾಪ ಸೂಚಿಸಿದ್ದಾರೆ.
BIG BREAKING NEWS: ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ | Minister Umesh Katti No More
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ( Minister Umesh Katti ) ಅವರ ಅಕಾಲಿಕ ನಿಧನದಿಂದ ( Minister Umesh Katti passes away ) ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (@BSBommai) September 6, 2022
ಅಂದಹಾಗೆ ಕಳೆದ ರಾತ್ರಿ 11 ಗಂಟೆಗೆ ಸಚಿವ ಉಮೇಶ್ ಕತ್ತಿಯವರಿಗೆ ಅವರ ನಿವಾಸದಲ್ಲಿ ಹೃದಯಾಘಾತವಾಗಿತ್ತು. ಅವರನ್ನು ತಕ್ಷಣ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು. ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಕುಟುಂಬಸ್ತರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ, ಅವರಿಗೆ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ್ದರು. ಆದ್ರೇ ವೈದ್ಯರು ನಾಲ್ಕೈದು ಬಾರಿ ಹೃದಯ ತಪಾಸಣೆ ನಡೆಸಿದರೂ ಚಿಕಿತ್ಸೆಗೆ ಸ್ಪಂದಿಸದೇ, ಸಾವನ್ನಪ್ಪಿರೋದಾಗಿ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ