ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ( Bengaluru Heavy Rain ) ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ( Primary and High School ) ಇಂದು ರಜೆ ಘೋಷಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ದಕ್ಷಿಣ ವಲಯ-4ರ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದು, ನಗರದಲ್ಲಿ ಭಾರೀ, ಧಾರಾಕಾರ ಮಳೆಯಿಂದ ಹಲವು ಪ್ರದೇಶಗಳು ಜಲಾವೃತಗೊಂಡಿರುವುದರಿಂದ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್ ಪುರಂ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಿನಾಂಕ 07-09-2022ರಂದು ರಜೆ ಘೋಷಿಸಲು ಜಿಲ್ಲಾಧಿಕಾರಿಗಳು ಸೂಚಿಸಿದದಾರೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ನಾಳೆ ಬೆಂಗಳೂರು ಪೂರ್ವ ತಾಲೂಕಿನ ಕೆ ಆರ್ ಪುರಂ ದಕ್ಷಿಣ ವಲಯ 4ಕ್ಕೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ದಿನಾಂಕ 07-09-2022ರಂದು ರಜೆಯನ್ನು ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಎರಡು ಶನಿವಾರಗಳಂದು ಪೂರ್ಣ ದಿನ ಕಾರ್ಯನಿರ್ವಹಿಸುವ ಮೂಲಕ ಸರಿದೂಗಿಸುವಂತೆ ಸೂಚಿಸಿದ್ದಾರೆ.