ಉತ್ತರ ಪ್ರದೇಶ: ಬಂಧಿತ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ವಿರೋಧಿಸಿದೆ.
ಕಪ್ಪನ್ ವಿರುದ್ಧ ಉತ್ತರ ಪ್ರದೇಶ ಸರ್ಕಾರವು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಕಪ್ಪನ್ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಎಫ್ಐ ಮತ್ತು ಅದರ ವಿಭಾಗವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ನಂತಹ ಭಯೋತ್ಪಾದಕ ನಿಧಿ/ಯೋಜನೆ ಸಂಸ್ಥೆಗಳೊಂದಿಗೆ ಕಪ್ಪನ್ ಸಂಪರ್ಕ ಹೊಂದಿದ್ದಾರೆ. ಈ ಸಂಘಟನೆಗಳು ಟರ್ಕಿಯ IHH ನಂತಹ ಅಲ್ ಖೈದಾ-ಸಂಯೋಜಿತ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿವೆ ಎಂದು ಹೇಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತನ್ನ ಅಫಿಡವಿಟ್ನಲ್ಲಿ ತಿಳಿಸಿದೆ.
ಉತ್ತರ ಪ್ರದೇಶ ಪೊಲೀಸರು ಈ ಸಂಬಂಧ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಅಫಿಡವಿಟ್ನಲ್ಲಿ, ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಪಿಎಫ್ಐ ಜೊತೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.
2020 ರ ಅಕ್ಟೋಬರ್ನಲ್ಲಿ ಹಥರಾಸ್ನಲ್ಲಿ ಸಿದ್ದಿಕ್ ಕಪ್ಪನ್ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಅವರನ್ನು ಮಥುರಾದಲ್ಲಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಕಪ್ಪನ್ ಮೇಲೆ ದೇಶದ್ರೋಹ ಮತ್ತು ಕಾನೂನು ಬಾಹಿರ ಚಟುವಟಿಕೆಗಳೆ ಕಾಯ್ದೆಯಡಿ ಆರೋಪ ಹೊರಿಸಲಾಗಿತ್ತು. ಅಂದಿನಿಂದ ಕಪ್ಪನ್ ಜೈಲಿನಲ್ಲಿದ್ದಾರೆ. ಕಳೆದ ತಿಂಗಳು ಅಲಹಾಬಾದ್ ನ್ಯಾಯಾಲಯ ಕಪ್ಪನ್ ಅವರ ಜಾಮೀನು ಅರ್ಜಿ ತಿರಸ್ಕರಿಸಿದ ನಂತ್ರ, ಕಪ್ಪನ್ ಸುಪ್ರೀಂ ಮೆಟ್ಟಿಲೇರಿದ್ದರು. ಇನ್ನೂ, ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಸೆಪ್ಟೆಂಬರ್ 9 ಕ್ಕೆ ಮುಂದೂಡಿದೆ.
SHOCKING NEWS: ಬೈಕ್ ಖರೀದಿಸಲು ಹಣಕ್ಕಾಗಿ ಕಿಡ್ನ್ಯಾಪ್: ಕಾರಿನಲ್ಲೇ ಕತ್ತು ಹಿಸುಕಿ ಇಬ್ಬರು ವಿದ್ಯಾರ್ಥಿಗಳ ಕೊಲೆ