ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
BIG NEWS: ಬಂಧಿತ ಕೇರಳ ಪತ್ರಕರ್ತ ʻಸಿದ್ದಿಕ್ ಕಪ್ಪನ್ʼಗೆ ಭಯೋತ್ಪಾದಕರೊಂದಿಗೆ ಲಿಂಕ್ ಇದೆ: ಯುಪಿ ಸರ್ಕಾರ
ಇಂದು ಉಮೇಶ್ ಕತ್ತಿ ಅವರ ಸ್ವಗ್ರಾಮವಾದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿದ್ದು, ಮಧ್ಯಾಹ್ನ 3.30ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 8.10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಅಲ್ಲಿಂದ ಬೆಲ್ಲದ ಬಾಗೇವಾಡಿಯಲ್ಲಿರುವ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಗೆ ಮೃತದೇಹ ಶಿಪ್ಟ್ ಮಾಡಲಾಗುತ್ತದೆ. ಅಲ್ಲಿಂದ ಬೆಲ್ಲದ ಬಾಗೇವಾಡಿಯ ಸ್ವಂತ ನಿವಾಸಕ್ಕೆ ಪಾರ್ಥಿವ ಶರೀರ ಸ್ಥಳಾಂತರವಾಗಲಿದ್ದು, ಮನೆಯ ಆವರಣದಲ್ಲಿ ಕುಟುಂಬಸ್ಥರು ಪೂಜೆ ಪುರಸ್ಕಾರ ನೆರವೇರಿಸಲಿದ್ದಾರೆ. ಸಂಜೆ 5 ಗಂಟೆಗೆ ಉಮೇಶ್ ಕತ್ತಿ ಅವರ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ರಾತ್ರಿ ಭೋಜನ ಸ್ವೀಕರಿಸಿದ ಬಳಿಕ ಶೌಚಾಲಯಕ್ಕೆ ತೆರಳಿದ ವೇಳೆ ಹೃದಯಾಘಾತ ಸಂಭವಿಸಿದೆ. ಅಲ್ಲೇ ಕುಸಿದು ಬಿದ್ದಿದ್ದ ಅವರನ್ನು ಸಮೀಪದ ಎಸ್.ಎಂ. ರಾಮಯ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.