ಬೆಂಗಳೂರು: ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಇಡೀ ಬೆಂಗಳೂರೇ ನಲಗು ಹೋಗಿದೆ. ಅಷ್ಟೇ ಅಲ್ಲದೆ ನಗರದ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನುಡುವೆ ಸಂಸದ ತೇಜಸ್ವಿ ಸೂರ್ಯ ಅವರು ಇನ್ಸ್ಟಾಗ್ರಾಂನಲ್ಲಿ ದೋಸೆ ಫೋಟೊ ನೋಡಿ ಟೆಂಪ್ಟ್ ಆಗಿ ಪದ್ಮನಾಭ ನಗರದ ಹೋಟೆಲ್ಗೆ ಭೇಟಿ ನೀಡಿರುವ ಬಗ್ಗೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
BIGG NEWS : ಕಾರಿನ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ : ತಪ್ಪಿದರೆ ದಂಡ ಫಿಕ್ಸ್! Seat belt
ಜನರು ಮಳೆಯಿಂದ ಸಂಕಷ್ಟ ಪಡುತ್ತಿದ್ದಾಗ ಬೇಜವಾಬ್ದಾರಿ ಸಂಸದ ಹೋಟೆಲ್ ಒಂದನ್ನು ಪ್ರಚಾರ ಮಾಡುತ್ತಾ, ದೋಸೆಯ ರುಚಿಯನ್ನು ಸವಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನಡೆಯನ್ನು ಪ್ರತಿಪಕ್ಷಗಳು ಮತ್ತು ಜನರು ಟೀಕಿಸಿದ್ದಾರೆ.
ವಿಡಿಯೊದಲ್ಲಿ ತೇಜಸ್ವಿ ಸೂರ್ಯ, ‘ಪದ್ಮನಾಭ ನಗರದ ಸಾತ್ವಿ ಕಿಚನ್ಗೆ ಬಂದಿದ್ದೆ. ಇನ್ಸ್ಟಾಗ್ರಾಂನಲ್ಲಿ ದೋಸೆಯ ಫೋಟೊ ನೋಡಿ ಟೆಂಪ್ಟ್ ಆಗಿ ಇಲ್ಲಿಗೆ ಬಂದಿದ್ದು. ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ. ನೀವೂ ಬನ್ನಿ. ತಿಂದಾಗ್ಲೇನೆ ಆಸ್ವಾದನೆ ನಿಮಗೆ ಗೊತ್ತಾಗುವುದು. ಉಪ್ಪಿಟ್ಟು ಬಹಳ ಚೆನ್ನಾಗಿದೆ. ಬನ್ನಿ’ ಎಂದು ಜನರನ್ನು ಆಹ್ವಾನಿಸುತ್ತಿರುವುದು ಇದೆಈ ವಿಡಿಯೊ ಸೆಪ್ಟೆಂಬರ್ 5ರಂದು ಸೋಮವಾರ ತೆಗೆದದ್ದಾಗಿದೆ ಎಂದು ನಿತ್ಯಾನಂದ ಶೆಟ್ಟಿ ಎಂಬುವವರು ಫೇಸ್ಬುಕ್ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
Video dated 5th September.@Tejasvi_Surya was enjoying a good breakfast while Bangalore was drowning.
Has he visited even a single flood affected region? pic.twitter.com/uFnZ4Rjs1m— Lavanya Ballal (@LavanyaBallal) September 6, 2022