ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಸಕ್ಕರೆ ಉದ್ಯಮಕ್ಕೆ ಸಚಿವ ಉಮೇಶ್ ಕತ್ತಿ ಅವರ ಕೊಡುಗೆ ಅಪಾರ. ಅವರು ಮಾಡಿದ ಕೊಡುಗೆ ಮರೆಯುವಂತಿಲ್ಲ ಎಂದರು.
BIGG NEWS: ಇಂದು ಸಂಜೆ 5 ಗಂಟೆಗೆ ಉಮೇಶ್ ಕತ್ತಿ ಅಂತ್ಯಕ್ರಿಯೆ; ಅಂತಿಮ ವಿಧಿವಿಧಾನದಲ್ಲಿ ಸಿಎಂ ಬೊಮ್ಮಾಯಿ ಭಾಗಿ
ರಾಜ್ಯ ವಿಧಾನಸಭೆ ಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ ಎಂದರು.