ಚಿಕ್ಕಮಗಳೂರು: ರಾಜ್ಯದಲ್ಲಿ ನಿರಂತರವಾಗಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಮಳೆ ವ್ಯಾಪಕವಾಗಿದೆ. ಹೀಗಾಗಿ ಅವಾಂತರ ಸೃಷ್ಟಿಯಾಗಿದ್ದು, ಮೃತವ್ಯಕ್ತಿಯ ಶವವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಎರಡು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿರುವಂತಹ ಕಡೂರು ತಾಲೂಕಿನ ಎಸ್.ಬೊಮ್ಮೇನಹಳ್ಳಿಯಲ್ಲಿ ನಡೆದಿದೆ.
BIGG NEWS: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಅಶ್ವತ್ಥ್ ನಾರಾಯಣ ಸಭೆ
ಪ್ರಮೋದ್ ಎಂಬಾತ ಮೃತಪಟ್ಟಿದ್ದ. ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಜನ ಪರದಾಡಿದ್ದು, ಎರಡು ದಿನಗಳ ಬಳಿಕ ಅಂತ್ಯಸಂಸ್ಕಾರ ಮಾಡಿದ್ದಾರೆ. ಕಡೂರು ತಾಲೂಕಿನ ಚಿಕ್ಕ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಬೊಮ್ಮನಹಳ್ಳಿಯಲ್ಲಿ ಬಹಳ ವರ್ಷಗಳ ನಂತರ ದೇವನೂರು ಕೆರೆ ತುಂಬಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು. ಹೀಗಾಗಿ ಈ ಗ್ರಾಮದಿಂದ ಸ್ಮಶಾನಕ್ಕೆ ಹೋಗುವ ದಾರಿ ಕೂಡ ನೀರಿನಿಂದ ಜಲಾವೃತವಾಗಿದ್ದು, ಮೃತದೇಹ ಕೊಂಡೊಯ್ಯಲು ಸಾಧ್ಯವಾಗದಿರುವುದರಿಂದ ಎರಡು ದಿನಗಳ ಕಾಲ ಶವವಿಟ್ಟು ಕಾದಿದ್ದಾರೆ.
BIGG NEWS: ಇಂದು ಸಂಜೆ 5 ಗಂಟೆಗೆ ಐಟಿ-ಬಿಟಿ ಕಂಪನಿಗಳ ಜೊತೆ ಅಶ್ವತ್ಥ್ ನಾರಾಯಣ ಸಭೆ
ಎರಡು ದಿನದ ಬಳಿಕ ನೀರು ಸ್ವಲ್ಪ ಕಡಿಮೆಯಾದ ನಂತರ ನೀರಲ್ಲೇ ಶವವನ್ನು ಸ್ಮಶಾನಕ್ಕೆ ಗ್ರಾಮಸ್ಥರು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಶವಸಂಸ್ಕಾರ ಮಾಡಲು ಗ್ರಾಮಸ್ಥರು ಪರದಾಡಿದ್ದಾರೆ. ಬಳಿಕ ಸ್ವಲ್ಪ ಎತ್ತರದ ಭಾಗದಲ್ಲಿ ಗುಂಡಿ ತೆಗೆದು ಅಲ್ಲಿ ಮೃತರ ಅಂತ್ಯಕ್ರಿಯೆ ಮಾಡಲಾಗಿದೆ.