ಬೆಂಗಳೂರು: ಕಳೆದ ಮೂರು ದಿನಗಳಿಂದ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ನಗರದ ಜನರು ಹೈರಾಣಾಗಿದ್ದಾರೆ. ಉತ್ತರ ಭಾಗದಲ್ಲಿ ಮಳೆ ಹೆಚ್ಚಿದ್ದರೂ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
BIGG NEWS: ಕೋಲಾರದಲ್ಲಿ ನಿಲ್ಲದ ಮಳೆಯ ಅವಾಂತರ; ಶಾಲೆ ಗೋಡೆ ಕುಸಿತ; ಆತಂಕದಲ್ಲಿ ವಿದ್ಯಾರ್ಥಿಗಳು
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 3 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ರಾತ್ರಿ ವೇಳೆಗೆ NDRF ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಿಂದ 5,000ಕ್ಕೂ ಹೆಚ್ಚು ಜನರನ್ನು ರಕ್ಷಿಸಿವೆ.