ಶಿವಮೊಗ್ಗ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಭಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
BREAKING NEWS: ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ – ಸಿಎಂ ಬೊಮ್ಮಾಯಿ
ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 30 ದಿನಗಳೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರವನ್ನು ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ ಆನ್ಲೈನ್ ಮೂಲಕ ಕೆ.ಎಸ್.ಬಿ. ಜಾಲತಾಣ www.ksb.gov.in ರಲ್ಲಿ ಅವಶ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ www.ksb.gov.in ಹಾಗೂ ದೂ.ಸಂ.: 08182-220925 ನ್ನು ಸಂಪರ್ಕಿಸುವುದು.