ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದ ( Vanivilas Sagar Dam ) ಬಗ್ಗೆ ಹರಿದಾಡುತ್ತಿರುವಂತ ಸುದ್ದಿ ಸುಳ್ಳಾಗಿದೆ. ಡಾಂನ ಎಲ್ಲಿಯೂ ಬಿರುಕು ಬಿಟ್ಟಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ( Social Media ) ಹರಿದಾಡುತ್ತಿರುವಂತ ಸುದ್ದಿ ಸುಳ್ಳಾಗಿದೆ. ಜನರು ಅದನ್ನು ನಂಬಬಾರದು. ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಿದ್ರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಹಿರಿಯೂರು ಕ್ಷೇತ್ರದ ಶಾಸಕ ಪೂರ್ಣಿಮಾ ಶ್ರೀನಿವಾಸ್ ( MLA Poornima Srinivas ) ತಿಳಿಸಿದ್ದಾರೆ.
ಈ ಸಂಬಂಧ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವಿವಿ ಸಾಗರ 135 ಅಡಿ ನೀರು ಭರ್ತಿಯಾಗಿದೆ. ಜಲಾಶಯ ತೊಂದರೆಯಲ್ಲಿ ಇದೆ ಎಂಬುದಾಗಿ ಸುದ್ದಿ ಹರಿದಾಡುತ್ತಿದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಎಷ್ಟು ಇದೆಯೋ ಅಷ್ಟೇ ಪ್ರಮಾಣದಲ್ಲಿ ಹೊರ ಹರಿವಿನ ಪ್ರಮಾಣ ಕೂಡ ಹೆಚ್ಚಿಸಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಇಂದು ವಾಣಿ ವಿಲಾಸ ಜಲಾಶಯಕ್ಕೆ ಸೇಫ್ಟಿ ಮೆಜರ್ಮೆಂಟ್ ಟೀಂ ಕೂಡ ಭೇಟಿ ನೀಡಲಿದೆ. ಅವರು ಪರಿಶೀಲನೆ ನಡೆಸಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಕಿರುವಂತ ಪೋಟೋ ತಣಿವಿನ ರೀತಿಯ ಪೋಟೋವಾಗಿದೆ. ಡ್ಯಾಂ ಎಲ್ಲಿಯೂ ಬಿರುಕು ಬಿಟ್ಟಿಲ್ಲ, ಸುರಕ್ಷಿತವಾಗಿದೆ. ಇಂದು ಸಂಜೆ ನಾನು ವಾಣಿ ವಿಲಾಸ ಸಾಗರ ಡ್ಯಾಂಗೆ ಭೇಟಿ ನೀಡಲಿದ್ದೇನೆ. ಸುಳ್ಳು, ವದಂತಿಗಳನ್ನು ಜನರು ನಂಬಬೇಡಿ ಎಂಬುದಾಗಿ ಮನವಿ ಮಾಡಿದ್ದಾರೆ.
BIG NEWS: ಬೆಂಗಳೂರಿನಲ್ಲಿ ಭಾರೀ ಮಳೆಗೆ 600 ಮನೆ, 130 ಅಪಾರ್ಮೆಂಟ್ ಜಲಾವೃತ: 4,500 ಕುಟುಂಬಗಳು ಕಂಗಾಲು
ವಿವಿ ಸಾಗರ ಡ್ಯಾಂ ಉತ್ತಮ ಪ್ಲಾನ್ ನಿಂದ ಮೈಸೂರು ಅರಸರ ಕಾಲದಲ್ಲಿ ಕಟ್ಟಿರುವಂತ ಅಣೆಕಟ್ಟು ಆಗಿದೆ. ಜಲಾಶಯದ ಇಕ್ಕೆಲಗಳಲ್ಲಿ ಬೆಟ್ಟಗಳಿವೆ. ಹೀಗಾಗಿ ಡ್ಯಾಂ ಸುರಕ್ಷತೆ ಬಗ್ಗೆ ಯಾವುದೇ ಆತಂಕವನ್ನು ಜನರು ಪಡಬಾರದು. ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
BIG NEWS: ಇಂದು ಪ್ರಧಾನಿ ಮೋದಿಯಿಂದ ಇಂಡಿಯಾ ಗೇಟ್ ಬಳಿ ʻನೇತಾಜಿʼ ಅವರ 28 ಅಡಿ ಎತ್ತರದ ಪ್ರತಿಮೆ ಅನಾವರಣ!
ಅಂದಹಾಗೇ, ವಾಣಿ ವಿಲಾಸ ಜಲಾಶಯಕ್ಕೆ 14891 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 135 ಅಡಿ ಆಗಿದೆ. ಡ್ಯಾಂ ನಿಂದ 14736 ಕ್ಯೂಸೆಕ್ ಪ್ರಮಾಣದಲ್ಲಿ ನೀರನ್ನು ಹೊರ ಬಿಡಲಾಗುತ್ತಿದೆ. ಹೀಗಾಗಿ ವಿವಿ ಸಾಗರ ಅಣೆಕಟ್ಟು ಸುರಕ್ಷಿತವಾಗಿದೆ. ಸುಳ್ಳು ವದಂತಿಗಳನ್ನು ನಂಬಬೇಡಿ ಎಂಬುದು ನಿಮ್ಮ ಕನ್ನಡ ನ್ಯೂಸ್ ನೌ ಸಂಸ್ಥೆಯ ಮನವಿ ಕೂಡ ಆಗಿದೆ.
ವರದಿ : ವಸಂತ ಬಿ ಈಶ್ವರಗೆರೆ