ಉತ್ತರ ಪ್ರದೇಶ: ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ.
ವಿಡಿಯೋದಲ್ಲಿ, ಸೋಹಾನ್ ಬ್ಲಾಕ್ನ ಪಿಪ್ರಾ ಗ್ರಾಮದ ಶಾಲೆಯ ಪ್ರಾಂಶುಪಾಲರ ಸಮ್ಮುಖದಲ್ಲಿ ವಿದ್ಯಾರ್ಥಿಗಳು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಪ್ರಾಂಶುಪಾಲರು ನಿಂತು ಶೌಚಾಲಯವನ್ನು ಅಪ್ರಾಪ್ತ ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸುತ್ತಿದ್ದಾರೆ. ಇದರ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
Primary School Students Made To Clean Toilet by Principle in Ballia, Uttar Pradesh.
The incident was reported from Pipra Kala Primary School of Sohav Block in Ballia. pic.twitter.com/oYaqqBhFJA
— Ahmed Khabeer احمد خبیر (@AhmedKhabeer_) September 8, 2022
ಮತ್ತೊಂದು ವೀಡಿಯೊದಲ್ಲಿ, “ಶೌಚಾಲಯವನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ನಾನು ಶೌಚಾಲಯಕ್ಕೆ ಬೀಗ ಹಾಕುತ್ತೇನೆ. ನಂತರ, ನೀವು ಮಲವಿಸರ್ಜನೆಗೆ ಮನೆಗೆ ಹೋಗಬೇಕಾಗುತ್ತದೆ” ಎಂದು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಹೇಳುವುದನ್ನು ಕೇಳಬಹುದು.
ಪ್ರದೇಶದ ಬ್ಲಾಕ್ ಶಿಕ್ಷಣಾಧಿಕಾರಿ ಅಖಿಲೇಶ್ ಕುಮಾರ್ ಝಾ ಅವರು ವೀಡಿಯೊವನ್ನು ನೋಡಿದ್ದು, ವೀಡಿಯೊದ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಾಂಶುಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಅಖಿಲೇಶ್ ಕುಮಾರ್ ಝಾ ತಿಳಿಸಿದ್ದಾರೆ.
ಆತ್ಮಹತ್ಯೆ ಪತ್ರದಲ್ಲಿ ಹೆಸರಿದ್ದ ಮಾತ್ರಕ್ಕೆ ತಪ್ಪಿತಸ್ಥರೆಂದು ಸಾಬೀತುಪಡಿಸಲು ಸಾಕಾಗುವುದಿಲ್ಲ : ಹೈಕೋರ್ಟ್