ಬೆಂಗಳೂರು : ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ ಹೊಸದಾಗಿ 3 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
BIG NEWS: ಬ್ರಿಟನ್ ರಾಣಿ ʻಎಲಿಜಬೆತ್ʼ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | Queen Elizabeth Death
ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಅವರು, 2022-23 ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ. ಇದರಲ್ಲಿ ಹೊಸದಾಗಿ 3 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಅಗ್ನಿಶಾಮಕ ಇಲಾಖೆಗೆ 1,600 ಜನರ ನೇಮಕ