ಬೆಂಗಳೂರು : ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಅರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಉತ್ತರ ಕರ್ನಾಟಕದ ಬೆಳಗಾವಿ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಹಾಸನ, ಚಿಕ್ಕಮಗಳುರು, ಶಿವಮೊಗ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.