ತುಮಕೂರು : ಇಂದು ತುಮಕೂರು ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಮೇಯರ್ ಸ್ಥಾನ ಬಹುತೇಕ ಕಾಂಗ್ರೆಸ್ ಸಿಗಲಿದೆ ಎನ್ನಲಾಗಿದೆ.
ಬಿಜೆಪಿ, ಜೆಡಿಎಸ್ ನಲ್ಲಿ ಎಸ್ ಸಿ ಮಹಿಳಾ ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ತುಮಕೂರು ಪಾಲಿಕೆ ಮೇಯರ್ ಪಟ್ಟ ಬಹುತೇಕ ಕಾಂಗ್ರೆಸ್ ಗೆ ಸಿಗಲಿದೆ. ಕಾಂಗ್ರೆಸ್ ಪಕ್ಷದಲ್ಲಿ 9 ನೇ ವಾರ್ಡ್ ನ ಎಂ.ಪ್ರಭಾವತಿ ಹಾಗೂ 19 ನೇ ವಾರ್ಡನ್ ಬಿ.ಎಸ್. ರೂಪಶ್ರೀ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ತುಮಕೂರು ಮಹಾನಗರ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಉಪಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಸಾಧ್ಯತೆ ಇದೆ.