ಕಲಬುರಗಿ: ಜಿಲ್ಲೆಯಲ್ಲಿ ಸುರಿಯುತ್ತಿರು ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಸೇತುವೆಗಳು ಜಲಾವೃತವಾಗಿ ಜಿಲ್ಲೆಯ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.ಮನೆಗಳಿಗೆ, ಜಮೀನುಗಳಿಗೆ ನೀರು ನುಗ್ಗಿದ್ದು, ಶಾಲೆಗೆ ತೆರಳಿದ ಮಕ್ಕಳು, ಜಮೀನುಗಳಿಗೆ ತೆರಳಿದ ರೈತರು ಮರಳಿ ಗ್ರಾಮಕ್ಕೆ ಹೋಗಲು ಪರದಾಡಿದ್ದಾರೆ.
ಜಿಲ್ಲೆಯ ಆಳಂದ ತಾಲೂಕಿನ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ.ಕಲ್ಲಹಂಗರಗಾ ಗ್ರಾಮದ ಹೊರ ವಲಯದಲ್ಲಿರುವ ಹಳ್ಳ ತುಂಬಿ ಸೇತುವೆ ಕೆರೆಯಂತಾಗಿದೆ. ಹೀಗಾಗಿ ಜಂಬಗಾ, ಕಲ್ಲಹಂಗರಗಾ ಮಾರ್ಗವಾಗಿ ಚಿಂಚನಸೂರ ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಕಡಿತಗೊಂಡಿದೆ.
ಚಿಂಚೋಳಿ ತಾಲೂಕಿನಲ್ಲಿಯೂ ಮಳೆಯಿಂದ ಜನ ಪರದಾಡಿದ್ದಾರೆ. ಮಳೆಯಿಂದಾಗಿ ಕೋಡ್ಲಿ ಗ್ರಾಮದ ಮುಖ್ಯದ್ವಾರದ ಅಗಸಿ ಹತ್ರ ಸಣ್ಣ ಹಳ್ಳ ತುಂಬಿ ಹರಿಯುತ್ತಿದ್ದು, ಶಾಲಾ ಮಕ್ಕಳು ತತ್ತರಿಸಿ ಹೋಗಿದ್ದಾರೆ.