ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ( Government PU College Lecturer Recruitment ) ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ( Lecturer Recruitment ) ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ.
ಸೆ.5ರಂದು ಶಿಕ್ಷಕರ ದಿನಾಚರಣೆಯಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಂತ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಮನವಿಯಂತೆ 23 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಕೌನ್ಸಿಲಿಂಗ್ ದಿನವೇ ಆದೇಶ ಪ್ರತಿ ನೀಡಲಾಗಿದೆ. ಪಿಯು ಉಪನ್ಯಾಸಕರ ವರ್ಗಾವಣೆಯನ್ನು ಮಾಡಲಾಗುತ್ತದೆ. ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಬಡ್ತಿ ಪ್ರಕ್ರಿಯೆ ನಡೆಸಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಕೆಲಸಗಳು ತ್ವರಿತಗತಿಯಲ್ಲಿ ನಡೆಸಲು, ಪಾರದರ್ಶಕತೆ ತರಲು ಹೊಸ ಪ್ರಯತ್ನಗಳನ್ನು ಮುಂಬರುವ ದಿನಗಳಲ್ಲಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದರು.
ದೇಹದಲ್ಲಿ ಕೊಲೆಸ್ಟ್ರಾಲ್ & ಸಕ್ಕರೆ ನಿಯಂತ್ರಿಸಲು ಆವಕಾಡೊ ಹಣ್ಣು ರಾಮಬಾಣ : ಸಂಶೋಧನೆ | Avocado fruit benefits
778 ಪಿಯು ಉಪನ್ಯಾಸಕರ ನೇಮಕಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೂ ಮುಂಬರುವ ದಿನಗಳಲ್ಲಿ ಒಪ್ಪಿಗೆ ಸಿಗುವ ವಿಶ್ವಾಸವಿದೆ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಎಲ್ಲ ರೀತಿಯ ಪ್ರಯತ್ನಗಳು ರಾಜ್ಯ ಸರ್ಕಾರ ಮಾಡಲಿದೆ ಎಂದು ಹೇಳಿದ್ದರು.
ಇಂದು ಮತ್ತೆ ಅಧಿಕೃತವಾಗಿ ಟ್ವಿಟ್ ಮಾಡಿರುವಂತ ಅವರು, ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ.@BSBommai @BJP4Karnataka #ಜನಸ್ಪಂದನ #Janaspandana
— B.C Nagesh (@BCNagesh_bjp) September 10, 2022